ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ

Source: VB | By S O News | Published on 17th June 2021, 1:24 PM | State News |

ಬೆಂಗಳೂರು: ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೂ.17ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಜೂ.18ರಿಂದ ಎರಡು ದಿನಗಳವರೆಗೆ ಸಾಧಾರಣ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವ ಅರಬಿ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ವಾಯುಭಾರ (ದಟ್ಟ ಮೋಡ) ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದ ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಬುಧವಾರದಿಂದ ಜೂ.20ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಜೂ.17 ರಿಂದ 19ರವರೆಗೆ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಜೂ.17 ಮತ್ತು 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದರು.

ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಿದೆ. ಆಗುಂಬೆಯಲ್ಲಿ 20 ಸೆಂ. ಮೀ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕುದ್ರಾದಲ್ಲಿ 14 ಸೆಂ.ಮೀ, ಗೊಟ್ಟಿಗೆಹಾರ 14 ಸೆಂ.ಮೀ., ಕಾರವಾರದಲ್ಲಿ 10 ಸೆಂ. ಮೀ., ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯಲ್ಲಿ 11 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...