ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ: ಕಾಸರಗೋಡು ಜಿಲ್ಲೆಯಲ್ಲೂ ಆಗಸ್ಟ್ 6ರ ವರೆಗೆ ಆರೆಂಜ್ ಅಲರ್ಟ್

Source: uni | Published on 3rd August 2020, 12:58 AM | State News | Don't Miss |

ಕಾಸರಗೋಡು: ಕೇರಳದ ಎಲ್ಲ 14 ಜಿಲ್ಲೆಗಳಲ್ಲೂ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಲಭಿಸಿದೆ. ಅದರಂತೆ ಕಾಸರ‌ಗೋಡು ಜಿಲ್ಲೆಯಲ್ಲಿ ಆಗಸ್ಟ್ 3 ರಿಂದ 6ರ ವರೆಗೆ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಿಲ್ಲೆಯಲ್ಲಿ ತೀವ್ರ ಮಳೆಗೆ ಭೂಕುಸಿತ, ಮಣ್ಣು ಕುಸಿತ ಮತ್ತು ಪ್ರವಾಹದ ಸಾಧ್ಯತೆ ಇದ್ದು , ಇದರನ್ವಯ ಜಿಲ್ಲೆಯಲ್ಲಿ ಆಗಸ್ಟ್ 3 ರಿಂದ 6ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಕೇರಳದಲ್ಲಿ ಆಗಸ್ಟ್ 3 ಸೋಮವಾರದಿಂದ ಬಿರುಸಿನ ಮಳೆಯಾಗುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೋಮವಾರ ಮತ್ತು ಮಂಗಳವಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಆರೆಂಜ್ ಅಲರ್ಟ್ ಜಾರಿಗೊಳಿಸಲಾಗಿದೆ. ಆಗಸ್ಟ್ 4 ರ ಹೊತ್ತಿಗೆ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಉಂಟಾಗುತ್ತದೆ. ಆದ್ದರಿಂದ ಸೋಮವಾರ ಮತ್ತು ಮಂಗಳವಾರ ಕೇರಳ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು , ನಂತರದ ಕೆಲವು ದಿನಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...