ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ : ಬದಲಿ ಮಾರ್ಗ

Source: SO News | By Laxmi Tanaya | Published on 27th July 2023, 10:12 PM | State News |

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ 6,7 ಮತ್ತು 11 ನೇ ತಿರುವಿನಲ್ಲಿ ಭಾರೀ ಮಳೆ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದಿದೆ. ಅಲ್ಲದೇ ಹೆಚ್ಚಿನ ಮಳೆಯಿಂದಾಗಿ ತಡೆಗೋಡೆ ಕುಸಿದಿದ್ದು ಅಪಘಾತದ ಸಂಭವವಿರುವುದರಿಂದ ತಾತ್ಕಾಲಿಕವಾಗಿ ಭಾರೀ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.

     ತಕ್ಷಣದಿಂದ ದಿ: 27-07-2023 ರಿಂದ 15-09-2023 ರವರೆಗೆ ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಿದ್ದು ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಲಾಗಿದೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಆದೇಶಿಸಲಾಗಿದೆ.

   ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಚಲಿಸುವ ಭಾರೀ ವಾಹನಗಳು ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ ಮಾರ್ಗ ಹಾಗೂ ತೀರ್ಥಹಳ್ಳಿ - ಮಾಸ್ತಿಕಟ್ಟೆ- ಸಿದ್ದಾಪುರ- ಕುಂದಾಪುರ-ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಿದ್ದಾರೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...