ವಿದ್ಯುತ್ ಶಾಕ್: ಹೆಸ್ಕಾಂ ದಿನಗೂಲಿ ನೌಕರ ಸಾವು

Source: S O News Service | By Office Staff | Published on 15th February 2020, 8:37 PM | Coastal News |

ಯಲ್ಲಾಪುರ: ತಾಲೂಕಿನ ಮಳವಳ್ಳಿಯಲ್ಲಿ ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುವಾಗ ಆಕಸ್ಮಿಕ ವಿದ್ಯುತ್ ಸ್ಪರ್ಶ ತಗುಲಿ ಗಾಯಗೊಂಡಿದ್ದ ಹೆಸ್ಕಾಂ ಉಪವಿಭಾಗದ ದಿನಗೂಲಿ ನೌಕರ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

      ಸವಣೂರು ಹೂವಿನಸಿಗ್ಲಿ ನಿವಾಸಿ, ಅನಿಲ ನಿಂಗಪ್ಪ ದೇವಗಿರಿ (22) ಮೃತಪಟ್ಟ ದುರ್ದೈವಿ. ಈತ ಮಂಗಳವಾರ ಸಂಜೆ ನಾಲ್ಕು ಗಂಟೆಯ ಸುಮಾರು ಮಳವಳ್ಳಿಯ ವಿದ್ಯುತ್ ಕಂಪನಿ ವಿದ್ಯುತ್ ದುರಸ್ತಿಗೊಳಿಸುತ್ತಿರುವಾಗ ಆಕಸ್ಮಿಕವಾಗಿ ಹರಿದ ವಿದ್ಯುತ್ತಿನಿಂದಾಗಿ ಗಾಯಗೊಂಡವನನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಯಲ್ಲಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ತನಿಖೆ ಕೈಗೊಂಡಿದ್ದಾರೆ.
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...