ಶ್ರೀನಿವಾಸಪುರ: ನಾರವಮಾಕಲಹಳ್ಳಿ ಗ್ರಾಮದಲ್ಲಿ ಬಿಎಂಸಿ ಘಟಕ ಉದ್ಘಾಟನೆ

Source: Shabbir Ahmed | By S O News | Published on 5th March 2021, 8:14 PM | State News |

ಶ್ರೀನಿವಾಸಪುರ: ಬಿಎಂಸಿ ಘಟಕಗಳ ಸ್ಥಾಪನೆಯಿಂದ ಉತ್ತಮ ಗುಣಮಟ್ಟದ ಹಾಲು ಸಂಗ್ರಹಣೆ ಸಾಧ್ಯವಾಗಿದೆ ಎಂದು ಕೋಚಿಮುಲ್ ನಿದೇಶಕ ಎನ್.ಹನುಮೇಶ್ ಹೇಳಿದರು.

ತಾಲ್ಲೂಕಿನ  ನಾರವಮಾಕಲಹಳ್ಳಿ ಗ್ರಾಮದಲ್ಲಿ ಗುರುವಾರ 3 ಸಾವಿರ ಲೀಟರ್ ಮಾಮಥ್ಯದ ನೂತನ ಬಿಎಂಸಿ ಘಟಕ ಉದ್ಘಾಟಿಸಿ ಮಾತನಾಡಿ, ಬಿಎಂಸಿ ಘಟಕಗಳಲ್ಲಿ ಹಾಲನ್ನು ಶೀಥಲೀಕರಣ ಮಾಡುವುದರಿಂದ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ತಾಲ್ಲೂಕಿನಲ್ಲಿ ಪ್ರತಿ ದಿನ 55 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಹಾಲು ಉತ್ಪಾದಕರಿಗೆ ಲೀಟರ್ ಒಂದಕ್ಕೆ ರೂ.27 ನೀಡಲಾಗುತ್ತಿದೆ. ಪಶು ಆಹಾರವನ್ನು ಮೂಟೆಯೊಂದಕ್ಕೆ ರೂ.25 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಪ್ರಯೋಜನ ಪಡೆದು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು ಎಂದು ಹೇಳಿದರು.

ಹಾಲು ಉತ್ಪಾದಕರು ಯಾವುದೇ ಕಾರಣಕ್ಕೂ ಖಾಸಗಿ ಡೇರಿಗಳಿಗೆ ಹಾಲು ಮಾರಾಟ ಮಾಡಬಾರದು. ಹಾಗೆ ಮಾಡುವುದರಿಂದ ಹಾಲು ಒಕ್ಕೂಟದ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ ಎಂದು ಹೇಳಿದರು.

ಕ್ಯಾಂಪ್ ಕಚೇರಿಯ ಉಪ ವ್ಯವಸ್ಥಾಪಕ ಕೆ.ಎಸ್.ನರಸಿಂಹಯ್ಯ, ವಿಸ್ತರಣಾಧಿಕಾರಿಗಳಾದ ಎಂ.ಜಿ.ಶ್ರೀನಿವಾಸ್, ಎಸ್.ವಿನಾಯಕ ಇದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...