ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ: ಅಮೆರಿಕ ಅಧಿಕಾರಿ

Source: S O News | By I.G. Bhatkali | Published on 14th February 2022, 12:34 AM | National News |

ಹೊಸದಿಲ್ಲಿ: ಧಾರ್ಮಿಕ ಉಡುಪುಗಳ ಅನುಮತಿಯನ್ನು ನಿರ್ಧರಿಸಬಾರದು ಎಂದು ಅಮೆರಿಕದ ಅಂತರ್‌ರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ (ಐಆರ್‌ಎಫ್)ದ ರಾಯಭಾರಿ ರಾಶದ್ ಹುಸೇನ್ ಅವರು, ಶಾಲೆಗಳಲ್ಲಿ ಹಿಜಾಬ್ ನಿಷೇಧಗಳು ಮಹಿಳೆಯರು ಮತ್ತು ಬಾಲಕಿಯರಿಗೆ ಕಳಂಕವನ್ನುಂಟು ಮಾಡುತ್ತವೆ ಮತ್ತು ಅವರನ್ನು ಕಡೆಗಣಿಸುತ್ತವೆ ಎಂದು ಹೇಳಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಶುಕ್ರವಾರ ಆಸ್ಟ್ರೇಲಿಯದ ಮೆಲ್ಬರ್ನ್‌ನಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಅವರನ್ನು ಭೇಟಿಯಾಗಿ ದ್ವಿಪಕೀಯ ಸಹಕಾರದ ಕುರಿತು ಮಾತುಕತೆ ನಡೆಸಿದ ದಿನವೇ ಹುಸೇನ್‌ ಅವರ ಈ ಹೇಳಿಕೆ ಹೊರಬಿದ್ದಿದೆ.

ಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ)ಗೆ ಅಧ್ಯಕ್ಷ ಬರಾಕ್ ಒಬಾಮಾರ ಯುಎಸ್ ವಿಶೇಷ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸಿದ್ದ ಹುಸೇನ್ ಅವರನ್ನು ಬೈಡನ್ ಸರಕಾರವು ಇತ್ತೀಚೆಗೆ ಐಆರ್ ಎಫ್‌ನ ರಾಯಭಾರಿಯನ್ನಾಗಿ ನೇಮಕಗೊಳಿಸಿದೆ.

'ಧಾರ್ಮಿಕ ಸ್ವಾತಂತ್ರ್ಯವು ಧಾರ್ಮಿಕ ಉಡುಪನ್ನು ಆಯ್ಕೆ ಮಾಡುವ ಸಾಮರ್ಥ್ಯ ವನ್ನು ಒಳಗೊಂಡಿರುತ್ತದೆ. ಕರ್ನಾಟಕವು ಧಾರ್ಮಿಕ ಉಡುಗೆಗಳ ಅನುಮತಿಯನ್ನು

ನಿರ್ಧರಿಸಬಾರದು. ಶಾಲೆಗಳಲ್ಲಿ ನಿಷೇಧಗಳು ಧಾರ್ಮಿಕ ಸ್ವಾತಂತ್ರ್ಯವನ್ನು ಹಿಜಾಬ್ ಉಲ್ಲಂಘಿಸುತ್ತವೆ ಮತ್ತು ಮಹಿಳೆಯರು ಬಾಲಕಿಯರನ್ನು ಕಳಂಕಿತಗೊಳಿಸುತ್ತವೆ ಮತ್ತು ಅವರನ್ನು ಕಡೆಗಣಿಸುತ್ತವೆ' ಎಂದು ಹುಸೇನ್ ಟೀಟಿಸಿದ್ದಾರೆ.

ಅಮೆರಿಕದಲ್ಲಿ ಜನಿಸಿದ ಹುಸೇನ್ ಅವರ ತಂದೆ ಬಿಹಾರದವರು. ಯೇಲ್ ಲಾ ಸ್ಕೂಲ್‌ನಲ್ಲಿ ವ್ಯಾಸಂಗ ಮಾಡಿರುವ ಹುಸೇನ್ ಕೆನೆಡಿ ಸ್ಕೂಲ್ ಆಫ್ ಗವರ್ನಮೆಂಟ್ ನಿಂದ ಸಾರ್ವಜನಿಕ ಆಡಳಿತದಲ್ಲಿ ಮತ್ತು ಹಾರ್ವಡ್್ರ ವಿವಿಯಿಂದ ಅರೆಬಿಕ್ ಮತ್ತು ಇಸ್ಲಾಮಿಕ್ ಸ್ಟಡೀಸ್‌ನಲ್ಲಿ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...