ಉಡುಪಿ ಹಿಜಾಬ್ ಪ್ರಕರಣ:ರಾಜ್ಯ ಸರಕಾರಕ್ಕೆ ಎನ್ಎಚ್ಆರ್ ಸಿ ನೋಟಿಸ್

Source: VB | By I.G. Bhatkali | Published on 29th January 2022, 10:01 AM | Coastal News | State News |

ಹೊಸದಿಲ್ಲಿ: ಹಿಜಾಬ್ ಧರಿಸಿ ಉಡುಪಿಯ ಸರಕಾರಿ ಕಾಲೇಜು ಪ್ರವೇಶಿಸಲು 8 ವಿದ್ಯಾರ್ಥಿನಿಯರಿಗೆ ನಿರ್ಬಂಧ ವಿಧಿಸಿರು ವುದಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಗುರುವಾರ ಕರ್ನಾಟಕ ಸರಕಾರಕ್ಕೆ ನೋಟಿಸು ಜಾರಿ ಮಾಡಿದೆ.

“ಈ ಪ್ರಕರಣದ ಸತ್ಯಾಂಶಗಳು ಕಳವಳಕಾರಿ ಯಾಗಿದೆ. ದೂರಿನಲ್ಲಿ ಮಾಡಿರುವ ಆರೋಪ ಶಿಕ್ಷಣದ ಹಕ್ಕನ್ನು ಒಳಗೊಂಡಿರುವ ಗಂಭೀರ ಸ್ವರೂಪದ್ದಾಗಿದೆ. ಆದುದರಿಂದ ಈ ಪ್ರಕರಣ ಸಂತ್ರಸ್ತ ವಿದ್ಯಾರ್ಥಿನಿಯರ ಮಾನವ ಹಕ್ಕುಗಳ ಘೋರ ಉಲ್ಲಂಘನೆಯನ್ನು ಒಳಗೊಂಡಿದೆ” ಎಂದು ನೋಟಿಸಿನಲ್ಲಿ ಹೇಳಲಾಗಿದೆ.

ನೋಟಿಸನ್ನು ಉಡುಪಿಯ ಜಿಲ್ಲಾ ಮ್ಯಾಜಿ ಸ್ಟೇಟ್, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಲಾಗಿದೆ ಹಾಗೂ ನಾಲ್ಕು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಹಿಜಾಬ್ ಧರಿಸಿ ತರಗತಿ ಪರ್ವೇಶಿಸಲು ವಿದ್ಯಾರ್ಥಿಗಳಿಗೆ ಉಡುಪಿಯ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ನಿರ್ಬಂಧ ವಿಧಿಸಿ ಸುಮಾರು ಒಂದು ತಿಂಗಳು ಕಳೆಯಿತು. ತರಗತಿ ಪ್ರವೇಶಿಸಲು ಹಾಗೂ ಪಾಠಗಳನ್ನು ಕೇಳಲು ವಿದ್ಯಾರ್ಥಿನಿಯರು ಈಗಲೂ ಹೋರಾಟ ನಡೆಸುತ್ತಿದ್ದಾರೆ. ಈ ಎಲ್ಲ ವಿದ್ಯಾ ರ್ಥಿನಿಯರು 16ರಿಂದ 19 ವರ್ಷಗಳ ಒಳಗಿ ನವರು, ಡಿಸೆಂಬರ್ 31ರಿಂದ ಗೈರು ಹಾಜರು ದಾಖಲಿಸಲಾಗಿದೆ.

ಈ ಬಗ್ಗೆ ಗುಂಪಿನ ಇಬ್ಬರು ವಿದ್ಯಾರ್ಥಿನಿ ಯರಾದ ಎ.ಎಚ್. ಅಲ್ಫಾಸ್ (18) ಹಾಗೂ ಆಲಿಯಾ ಅಸ್ಸಾದಿ (17) ಈ ನಿರ್ಬಂಧದಿಂದ ತಮ್ಮ ಶಿಕ್ಷಣದಲ್ಲಿ ಯಾವ ರೀತಿಯ ಪರಿಣಾಮ ಉಂಟು ಮಾಡುತ್ತಿದೆ ಎಂಬ ಬಗ್ಗೆ ವಿವರಿಸಿದ್ದಾರೆ. “ನಾವು ಇಸ್ಲಾಂ ಧರ್ಮವನ್ನು ಅನುಸರಿಸುತ್ತಿದ್ದೇವೆ. ಹಿಜಾಬ್ ನಮ್ಮ ನಂಬಿಕೆಯ ಒಂದು ಭಾಗ. ಇದ ರೊಂದಿಗೆ ನಾವು ಭವಿಷ್ಯ ಹಾಗೂ ಉತ್ತಮ ಜೀವನದ ಬಗ್ಗೆ ನಿರೀಕ್ಷೆ ಇರಿಸಿ ಕೊಂಡ ವಿದ್ಯಾರ್ಥಿಗಳು, ನಮ್ಮ ಗುರುತು ಹಾಗೂ ಶಿಕ್ಷಣದ ನಡುವೆ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಅವರು ಇದ್ದಕ್ಕಿದ್ದಂತೆ ಯಾಕೆ ನಿರೀಕ್ಷಿಸಬೇಕು? ಇದು ನ್ಯಾಯವಲ್ಲ' ಎಂದು ಆಲಿಯಾ ಹೇಳಿ ದ್ದಾರೆ. ಕೆಲವು ತಿಂಗಳಲ್ಲಿ ಪರೀಕ್ಷೆ ನಡೆಯ ಲಿದೆ. ಪಾಠಗಳು ತಪ್ಪಿ ಹೋಗುವುದರಿಂದ ನಮ್ಮ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಅಲ್ದಾಸ್ ಹೇಳಿದ್ದಾರೆ.

“ನಮ್ಮ ಹಾಜರಾತಿ ಕೂಡ ಕಡಿಮೆಯಾಗು ಇದೆ. ನಾವು ಮುಖ್ಯವಾದ ಪಾಠಗಳನ್ನು ತಪ್ಪಿಸಿ ಕೊಳ್ಳುತ್ತಿದ್ದೇವೆ. ಇನ್ನು ಕೆಲವೇ ತಿಂಗಳಲ್ಲಿ ಪರೀಕ್ಷೆ ಬರಲಿದೆ. ಇನ್ನು ಮುಂದೆ ಏನು ನಡೆಯುತ್ತದೆ ಎಂಬ ಬಗ್ಗೆ ನಾವು ಆತಂಕಿತವಾಗಿದ್ದೇವೆ' ಎಂದು ಅಲ್ಮಾಸ್ ಹೇಳಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...