ಅದಾನಿ- ಹಿಂಡನ್‌ಬರ್ಗ್ ಪ್ರಕರಣ; ಮಾಧ್ಯಮಗಳ ವರದಿಗಾರಿಕೆ ನಿರ್ಬಂಧಕ್ಕೆ ಸುಪ್ರೀಂ ನಿರಾಕರಣೆ

Source: Vb | By I.G. Bhatkali | Published on 25th February 2023, 10:46 AM | National News |

ಹೊಸದಿಲ್ಲಿ:ಅದಾನಿ ಗುಂಪಿನ ಕಂಪೆನಿಗಳು ಶೇರು ಮಾರುಕಟ್ಟೆಯಲ್ಲಿ ಹಸ್ತಕ್ಷೇಪ ನಡೆಸಿ ತಮ್ಮ ಶೇರುಗಳ ಬೆಲೆಗಳನ್ನು ಕೃತಕವಾಗಿ ಏರಿಸಿಕೊಂಡಿವೆ ಎಂಬ ಆರೋಪಗಳ ಬಗ್ಗೆ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕು ಎಂದು ಕೋರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಈ ಅರ್ಜಿಯನ್ನು ವಕೀಲ ಎಮ್.ಎಲ್. ಶರ್ಮಾ ಮುಖ್ಯ ನ್ಯಾಯಾಧೀಶ ಡಿ.ವೈ. ಚಂದ್ರಚೂಡ್ ಮುಂದೆ ಮಂಡಿಸಿದ್ದರು.

“ನಾವು ಮಾಧ್ಯಮಗಳಿಗೆ 66 ಯಾವತ್ತೂ ಯಾವುದೇ ನಿರ್ಬಂಧ ವನ್ನು ಹೇರಲು ಹೋಗುವುದಿಲ್ಲ' ಎಂದು ಹೇಳಿದ ನ್ಯಾ. ಚಂದ್ರಚೂಡ್, ಈ ಪ್ರಕರಣದ ತೀರ್ಪನ್ನು ನ್ಯಾಯಾಲಯವು ಶೀಘ್ರದಲ್ಲೇ ನೀಡುವುದು ಎಂದರು.

ಕೃತಕವಾಗಿ ಬೆಲೆ ಏರಿಸಲಾಗಿರುವ ಶೇರುಗಳನ್ನು ಅಡವಿಟ್ಟು ಕೈಗಾರಿಕೋದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಗುಂಪಿನ ಕಂಪೆನಿಗಳು ಭಾರೀ ಮೊತ್ತದ ಸಾಲಗಳನ್ನು ಪಡೆದುಕೊಂಡಿವೆ ಹಾಗೂ ಅವುಗಳು ತಪ್ಪು ಲೆಕ್ಕಗಳನ್ನು ಕೊಡುತ್ತಿವೆ ಎಂಬುದಾಗಿ ಅಮೆರಿಕದ ಹಿಂಡನ್ಬರ್ಗ್ ರಿಸರ್ಚ್ ಕಂಪೆನಿಯು ಜನವರಿ 24ರಂದು ವರದಿ ಮಾಡಿದ ಬಳಿಕ, ಅವರ ಕಂಪೆನಿಗಳ ಶೇರುಗಳ ಬೆಲೆಗಳು ಭಾರೀ ಪ್ರಮಾಣದಲ್ಲಿ ಕುಸಿದಿವೆ.

ವರದಿ ಹೊರಬಿದ್ದ ಬಳಿಕ, ಅದಾನಿ ಗುಂಪಿನ ಕಂಪೆನಿಗಳ ಮಾರುಕಟ್ಟೆ ಬಂಡವಾಳ 136 ಬಿಲಿಯ ಡಾಲರ್ (ಸುಮಾರು 11.26 ಲಕ್ಷ ಕೋಟಿ ರೂಪಾಯಿ)ನಷ್ಟು ಇಳಿದಿದೆ. ಶರ್ಮಾ ಮತ್ತು ಇನ್ನೋರ್ವ ವಕೀಲ ವಿಶಾಲ್ ತಿವಾರಿ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಹಿಂಡನ್‌ಬರ್ಗ್ ರಿಸರ್ಚ್‌ನ ಸ್ಥಾಪಕ ನ್ಯಾತನ್ ಆ್ಯಂಡ‌ ಸನ್ ಮತ್ತು ಭಾರತದಲ್ಲಿರುವ ಅವರ ಪ್ರತಿನಿಧಿಗಳ ವಿರುದ್ಧ ಮೊಕದ್ದಮೆ ದಾಖಲಿಸಿ ತನಿಖೆ ನಡೆಸುವಂತೆ ಭಾರತೀಯ ಶೇರು ವಿನಿಮಯ ಮಂಡಳಿ (ಸೆಬಿ) ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ನೀಡುವಂತೆ ತನ್ನ ಅರ್ಜಿಯಲ್ಲಿ ಶರ್ಮಾ ಕೋರಿದ್ದರೆ, ಹಿಂಡನ್‌ಬರ್ಗ್ ವರದಿಯ ಬಗ್ಗೆ ತನಿಖೆ ಮಾಡಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಬೇಕು ಎಂಬುದಾಗಿ ತನ್ನ ಅರ್ಜಿಯಲ್ಲಿ ತಿವಾರಿ ಮನವಿ ಮಾಡಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...