ಮಂಗಳೂರು: ಮುಖ್ಯಮಂತ್ರಿಗೆ ಕೊಲೆ ಬೆದರಿಕೆ; ಹಿಂದೂ ಮಹಾಸಭಾ ರಾಜ್ಯ ಪ್ರ.ಕಾರ್ಯದರ್ಶಿ ಬಂಧನ

Source: VB News | By I.G. Bhatkali | Published on 20th September 2021, 11:53 AM | Coastal News | State News |

ಮಂಗಳೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಬಹಿರಂಗವಾಗಿ ಕೊಲೆ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ರವಿವಾರ ಬಂಧಿಸಿದ್ದಾರೆ.

ಬಂಧಿತ ಧರ್ಮೇಂದ್ರ ವಿರುದ್ಧ ಬೆಂಗಳೂರಿನ  ಮಹಾಲಕ್ಷ್ಮೀ ಲೇಔಟ್‌ನ ಡಾ.ಲೋಹಿತ್‌ ಕುಮಾರ್ ಸುವರ್ಣ ಎಂಬವರು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಧರ್ಮೇಂದ್ರರನ್ನು ಬಂಧಿಸಿರುವ ಮಂಗಳೂರು ಪೊಲೀಸರು, ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್, ಸಂದೀಪ್ ಶೆಟ್ಟಿ, ಪ್ರೇಮ್ ಪೊಳಲಿ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ಬಗ್ಗೆ ತನಿಖೆ: ಕಮಿಷನರ್

ನಗರದ ಬಳ್ಳಾಲ್‌ಬಾಗ್‌ನ ಪತ್ತುಮುಡಿ ಸೌಧ ಎಂಬಲ್ಲಿ ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಸೇರಿದಂತೆ ಹಲವರು ಸುದ್ದಿಗೋಷ್ಠಿ ನಡೆಸಿದ್ದರು. ಮೈಸೂರಿನ ನಂಜನಗೂಡು ದೇವಸ್ಥಾನ ಧ್ವಂಸ ಪ್ರಕರಣವನ್ನು ಹಿನ್ನೆಲೆಯಾಗಿ ಇಟ್ಟುಕೊಂಡು, 'ಹಿಂದೂಗಳ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಗಾಂಧೀಜಿಯನ್ನೇ ಬಿಟ್ಟಿಲ್ಲ ಇನ್ನು ನೀವೆಲ್ಲ ಯಾವ ಲೆಕ್ಕ” ಎಂದು ಹೇಳಿಕೆ ನೀಡಿದ್ದರು. ಮುಖ್ಯಮಂತ್ರಿ ಸಹಿತ ಸಂವಿಧಾನಾತ್ಮಕ ಹುದ್ದೆಗಳಲ್ಲಿರುವ ವ್ಯಕ್ತಿಗಳ ವಿರುದ್ಧ ಹೇಳಿಕೆ ನೀಡುವ ಮೂಲಕ ಅಶಾಂತಿ ಸೃಷ್ಟಿಸುತ್ತಿರುವ ಬಗ್ಗೆ ಡಾ.ಲೋಹಿತ್‌ ಕುಮಾರ್ ಸುವರ್ಣ ಎಂಬವರು ದೂರು ದಾಖಲಿಸಿದ್ದರು ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಪ್ರಕರಣದ ಆರೋಪಿಗಳು ವೈಯಕ್ತಿಕವಾಗಿ ಹೇಳಿದ್ದಾರೋ? ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಎಲ್ಲರ ಅಭಿಪ್ರಾಯವೂ ಇದೇನಾ? ಪೂರ್ವಭಾವಿ ಸಭೆ ಕರೆದು ಇಂತಹ ಹೇಳಿಕೆ ನೀಡಲು ಮುಂದಾಗಿದ್ದರೆ ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಯೇ ಎನ್ನುವ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...