ಜಂತರ್ ಮಂತರ್‌ನಲ್ಲಿ ಕೋಮು ಘೋಷಣೆ ಕೂಗಿದ್ದ ಹಿಂದೂ ರಕ್ಷಾ ದಳದ ಮುಖ್ಯಸ್ಥನ ಸೆರೆ

Source: VB | By I.G. Bhatkali | Published on 1st September 2021, 2:17 PM | National News |

ಹೊಸದಿಲ್ಲಿ: ಇಲ್ಲಿಯ ಜಂತರ್‌ ಮಂತರ್‌ನಲ್ಲಿ ಆ.8ರಂದು ನಡೆದಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕೋಮು ಘೋಷಣೆಗಳನ್ನು ಕೂಗಿದ್ದ ಆರೋಪಿ ಹಿಂದೂ ರಕ್ತಾ ದಳದ ಮುಖ್ಯಸ್ಥ ಭೂಪಿಂದರ್ ತೋಮರ್ ಅಲಿಯಾಸ್ ಪಿಂಕಿ ಚೌಧರಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸೋಮವಾರ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದ ವೀಡಿಯೊದಲ್ಲಿ ಚೌಧರಿ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದ. ಮಂಗಳವಾರ ತಾನು ಪೊಲೀಸರೆದುರು ಶರಣಾಗುವುದಾಗಿ ಮತ್ತು ತನಿಖೆಗೆ ಸಹಕರಿಸುವುದಾಗಿ ಆತ ವೀಡಿಯೊದಲ್ಲಿ ಹೇಳಿದ್ದ.

ಪ್ರತಿಭಟನೆ ಸಂದರ್ಭದಲ್ಲಿ ಮುಸ್ಲಿಂ ವಿರೋಧಿ ಘೋಷಣೆ ಗಳನ್ನು ಕೂಗುತ್ತಿದ್ದುದನ್ನು ತೋರಿಸುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಪ್ರಕರಣವನ್ನು ದಾಖಲಿಸಿಕೊಂಡಿದ್ದ ದಿಲ್ಲಿ ಪೊಲೀಸರು ಎಂಟು ಜನರನ್ನು ಈಗಾಗಲೇ ಬಂಧಿಸಿದ್ದಾರೆ. ಚೌಧರಿಯ ಬಂಧನಕ್ಕಾಗಿ ದಿಲ್ಲಿ ಮತ್ತು ನೆರೆಯ ರಾಜ್ಯ ಗಳಲ್ಲಿ ದಾಳಿಗಳನ್ನು ನಡೆಸಲಾಗಿತ್ತು.

ಧರಿಗೆ ಬಂಧನದ ವಿರುದ್ಧ ಮಧ್ಯಂತರ ರಕ್ಷಣೆ ನೀಡಲು ದಿಲ್ಲಿ ಉಚ್ಚ ನ್ಯಾಯಾಲಯವು ಶುಕ್ರವಾರ ನಿರಾಕರಿಸಿತ್ತು. ಇದಕ್ಕೂ ಮುನ್ನ ದಿಲ್ಲಿಯ ಸೆಷನ್ಸ್ ನ್ಯಾಯಾಲಯವು ಚೌಧರಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಿರಾಕರಿಸಿತ್ತು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...