ಹಿಟ್ ಆಂಡ್ ರನ್ ಸ್ಕೂಟರ್ ಸವಾರ ಸಾವು:ಇಬ್ಬರು ವಶಕ್ಕೆ..!

Source: so news | Published on 12th July 2020, 12:49 AM | Coastal News | Don't Miss |

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಹಿಟ್ ಆಂಡ್ ರನ್ ಮಾಡಿ ಪರಾರಿಯಾದ ಕಾರನ್ನು ಸಾರ್ವಜನಿಕರೇ ಹಿಡಿದು ಕೊಟ್ಟು ಪರಿಣಾಮ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಉಳ್ಳಾಲದಲ್ಲಿ ನಡೆದಿದೆ.
ನೇತ್ರಾವತಿ ಸೇತುವೆಯಲ್ಲಿ ಸ್ಕೂಟರ್ ಸವಾರರನ್ನು ಹಿಟ್ & ರನ್ ಮಾಡಿ ಕಾರ್ ಮತ್ತು ಚಾಲಕ ಆತನ ಸ್ನೇಹಿತ ಪರಾರಿಯಾಗಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಸಾರ್ವಜನಿಕರು ಸಿನಿಮೀಯ ಶೈಲಿಯಲ್ಲಿ‌ ಕಾರನ್ನು ಬೆನ್ನಟ್ಟಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಹಿಡಿದಿಟ್ಟಿದ್ದಾರೆ.
ಸ್ಕೂಟರ್ ಗೆ ಕಾರು ಢಿಕ್ಕಿ ಹೊಡೆದು ಪರಾರಿಯಾದ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸವಾರ ಉಳ್ಳಾಲ ಬಂಡಿಕೊಟ್ಯ ನಿವಾಸಿ ಸುಬೇದ್ (28) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೇತ್ರಾವತಿ ಸೇತುವೆಯಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಘಟನೆಯಲ್ಲಿ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಅಪಘಾತಕ್ಕೆ ಕಾರಣರಾದ ಕಾರು ಸವಾರ ಸೋಮೇಶ್ವರ ಪುರಸಭೆ ವ್ಯವಸ್ಥಾಪಕ ಕೃಷ್ಣ ಹಾಗೂ ಲಾರಿ ಸವಾರ ಕಾರ್ಕಳದ ಸುರೇಂದ್ರ ಎಂಬಾತನನ್ನು ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಹಸವಾರ ಚೆಂಬುಗುಡ್ಡೆ ಮಹಮ್ಮದ್ ಶಾಕೀರ್ (18) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸುಬೇದ್ ಹಾಗೂ ಮಹಮ್ಮದ್ ಶಾಕೀರ್ ಆಕ್ಟಿವಾ ಸ್ಕೂಟರಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ಚಲಿಸುತ್ತಿದ್ದ ಸಂದರ್ಭ ಹಿಂಬದಿಯಿಂದ ಕೃಷ್ಣ ಚಲಾಯಿಸುತ್ತಿದ್ದ ಐ20 ವಾಹನ ಸ್ಕೂಟರಿಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ಈ ವೇಳೆ ರಸ್ತೆಗೆ ಸ್ಕೂಟರ್ ಉರುಳಿದಾಗ ಹಿಂಬದಿಯಿಂದ ಕೇರಳ ಕಡೆಗೆ ಸಿಮೆಂಟ್ ಸಾಗಾಟ ನಡೆಸುತ್ತಿದ್ದ ಲಾರಿ ಸುಬೇದ್ ಮೇಲೆಯೇ ಚಲಿಸಿದೆ ಎನ್ನಲಾಗಿದೆ.
ಕಾರ್‌ನಲ್ಲಿದ್ದ‌ ಸೋಮೇಶ್ವರ ಪುರಸಭಾ ಸಿಬ್ಬಂದಿ ಕೃಷ್ಣ ಸೇರಿ ‌ಇಬ್ಬರು ಪೊಲೀಸರ ವಶಕ್ಕೆ‌ ಪಡೆದಿದ್ದಾರೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...