ಎಸ್‍ಎಸ್‍ಎಲ್‍ಸಿ ಪರೀಕ್ಷಾರ್ಥಿಗಳಿಗೆ ಬಣ್ಣ ಎರಚದಿರಲು ಮನವಿ 

Source: sonews | By Staff Correspondent | Published on 20th March 2019, 6:41 PM | Coastal News | Don't Miss |

ಕಾರವಾರ; ಹೋಳಿ ಹಬ್ಬದ ದಿನದಂದೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದರಿಂದ ಹೋಳಿ ಆಡುವ ಸಾರ್ವಜನಿಕರು ಪರೀಕ್ಷಾರ್ಥಿಗಳಿಗೆ ಬಣ್ಣ ಹಚ್ಚಿ ತೊಂದರೆ ಕೊಡದಿರುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಜಿಲ್ಲೆಯಲ್ಲಿ ದಿನಾಂಕ: 20-03-2019 ಹಾಗೂ 21-03-2019 ರಂದು ಹೋಳಿ ಹಬ್ಬವನ್ನು ಆಚರಣೆ ಪ್ರಯುಕ್ತ ಬಣ್ಣ ಎರಚುವ ಕಾರ್ಯಕ್ರಮ ಇರುತ್ತದೆ. ದಿನಾಂಕ: 21-03-2019 ರಂದು ಬೆಳಿಗ್ಗೆ 09-30 ಗಂಟೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಆದ್ದರಿಂದ ಬಣ್ಣ ಎರಚುವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಪರೀಕ್ಷೆಯಲ್ಲಿ ಪಾಲ್ಗೋಳ್ಳುವ ವಿದ್ಯಾರ್ಥಿಗಳಿಗೆ ಬಣ್ಣ ಎರಚಿ ತೊಂದರೆಯನ್ನುಂಟು ಮಾಡಬಾರದೆಂದು ಹಾಗೂ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಕಾನೂನು ಸುವ್ಯವಸ್ಥೆ ಧಕ್ಕೆಯಾಗದಂತೆ ಶಾಂತರೀತಿಯಲ್ಲಿ ಹೋಳಿ ಹಬ್ಬ (ಬಣ್ಣ) ಆಚರಿಸಲು ಸಾರ್ವಜನಿಕರು ಸಹಕರಿಸಬೇಕೆಂದು ಪೊಲೀಸ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...