ಪುರಸಭೆ ವ್ಯಾಪ್ತಿಯ ಕಂಟೈನಮೆಂಟ್ ವಲಯಗಳಲ್ಲಿ ಮನೆ ಮನೆ ತೆರಳಿ ಕರೋನಾ ಪರೀಕ್ಷೆ

Source: so news | By MV Bhatkal | Published on 18th June 2021, 8:27 PM | Coastal News |

ಭಟ್ಕಳ:ತಾಲ್ಲೂಕಿನ ಕೋವಿಡ್ ಸೋಂಕಿನ ಪ್ರಮಾಣ  ದಿನದಿಂದ ದಿನಕ್ಕೆ ಇಳಿಮುಖ ಕಾಣುತ್ತಿದೆ. ಇತ್ತ  ಪಟ್ಟಣ ವ್ಯಾಪ್ತಿಯಲ್ಲಿ ಮನೆ ಮನೆ ತೆರಳಿ ಕರೋನಾ ಪರೀಕ್ಷೆ ನಡೆಸಲಾಗುತ್ತಿದೆ. ಶುಕ್ರವಾರ ಪುರಸಭೆ ವ್ಯಾಪ್ತಿಯ ಮಣ್ಕುಳಿ ವಾರ್ಡಿನಲ್ಲಿ ಆರೋಗ್ಯ ಕಾರ್ಯಕರ್ತರು‌ ಮನೆ‌ಮನೆ ತೆರಳಿ ಕೋವಿಡ್ ಪರೀಕ್ಷೆ ನಡೆಸಿದರು. ಈ ಬಗ್ಗೆ ಪ್ರತಿಕ್ರೀಯೆ ನೀಡಿದ ಪುರಸಭೆ ಮುಖ್ಯಾಧಿಕಾರಿ ದೇವರಾಜು ಪಟ್ಟಣ ವ್ಯಾಪ್ತಿಯಲ್ಲಿ ಕರೋನಾ ಸೋಂಕಿತರ ಸಂಖ್ಯೆ ಕಡಿಮೆಯಿದೆ. ಅದರೂ ಕಂಟೈನಮೆಂಟ್ ವಲಯಗಳಲ್ಲಿ ಮನೆ ಮನೆ ತೆರಳಿ ಪರೀಕ್ಷೆ ನಡೆಸಲಾಗುತ್ತಿದೆ.‌ಕಳೇದ ವಾರ ಚೌಥನಿ ವಾರ್ಡಿನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಹೆಚ್ಚು ಕೇಸಗಳು ದಾಖಲಾಗುವ ವಾರ್ಡಿನಲ್ಲಿ ಕಡ್ಡಾಯವಾಗಿ ಮನೆಗೆ ತೆರಳಿ ಪರೀಕ್ಷೆ ನಡೆಸಿ ಸೋಂಕಿತರನ್ನು ಪತ್ತೆ ಹಚ್ಚಲಾಗುವುದು ಎಂದರು. ಪುರಸಭೆಯ ಸಿಬ್ಬಂದಿಗಳಾದ ಕಿರಣ, ಉದಯ,ಅರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆ, ಪೊಲೀಸ ಸಿಬ್ಬಂದಿ ಇದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...