ಗೃಹರಕ್ಷಕರ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ

Source: so news | Published on 5th December 2019, 12:30 AM | Coastal News | Don't Miss |

ಮಂಗಳೂರು: 2019-20ನೇ ಸಾಲಿನ ಗೃಹರಕ್ಷಕರ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟವು ಪೊಲೀಸ್ ಪೆರೇಡ್ ಮೈದಾನದಲ್ಲಿ ಡಿಸೆಂಬರ್ 1 ರಿಂದ 3 ವರೆಗೆ ನಡೆದಿದ್ದು, ಕ್ರೀಡಾಕೂಟದ ಸಮಾರೋಪ ಸಮಾರಂಭವು 3 ರಂದು   ಪೊಲೀಸ್ ಪೆರೇಡ್ ಮೈದಾನದಲ್ಲಿ ನಡೆಯಿತು. ತುಕಡಿ ನಾಯಕ  ವಸಂತ್ ಕುಮಾರ್ ಇವರ ನೇತೃತ್ವದಲ್ಲಿ ಅತಿಥಿಗಳಿಗೆ ಗೌರವ ವಂದನೆಯನ್ನು ನೀಡಲಾಯಿತು. ಕ್ರೀಡಾಕೂಟದ  ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ  ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ|| ಹರ್ಷ ಇವರು ಮಾತನಾಡಿ ನಮ್ಮ ದೇಶದಲ್ಲಿ ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ಅವಿನಾಭಾವ ಸಂಬಂಧವಿದೆ. ಪೊಲೀಸ್ ಇಲಾಖೆ ಬೇರೆ ಅಲ್ಲ, ಗೃಹರಕ್ಷಕ ಇಲಾಖೆ ಬೇರೆ ಅಲ್ಲ ಎಂದರು.  ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಹುದ್ದೆ ಖಾಲಿ ಇದ್ದು, ಹುದ್ದೆ ಭರ್ತಿಯಾಗುವವರೆಗೆ ಅತ್ಯಂತ ಸಮಗ್ರವಾಗಿ ಹೆಗಲು ಕೊಟ್ಟು ಟ್ರಾಫಿಕ್‍ನಲ್ಲಿ ಮತ್ತು ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗೃಹರಕ್ಷಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.  ಸರ್ಕಾರಿ ಸೇವೆ ಮಾಡುವ ಕಾಲ್‍ಸೆಂಟರ್ ಅವಕಾಶಗಳಿದ್ದು, ಗೃಹರಕ್ಷಕರು ಅದರ ಬೇರೆ ಬೇರೆ ಕೋರ್ಸ್‍ಗಳಲ್ಲಿ ತರಬೇತಿಯನ್ನು ಪಡೆದು ಸರ್ಕಾರಿ ಸೇವೆ ಸಲ್ಲಿಸಲು ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರವನ್ನು ನಾವು ನೀಡುತ್ತೇವೆ ಎಂದರು ಹಾಗೂ ನಾಲ್ಕು ಜಿಲ್ಲೆಯ ಗೃಹರಕ್ಷಕ ದಳದ ಕ್ರೀಡಾ ಪಟುಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು.
        ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಠ ಡಾ|| ಮುರಲೀ ಮೋಹನ  ಚೂಂತಾರು ಮಾತನಾಡಿ  ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಗೃಹರಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸಿದಕ್ಕೆ ಅಭಿನಂದನೆಯನ್ನು ಸಲ್ಲಿಸಿದರು. ವೈಯಕ್ತಿಕ ಚಾಂಪಿಯನ್‍ಶಿಪ್ ಗೆದ್ದ ಉತ್ತರ ಕನ್ನಡ ಜಿಲ್ಲೆಯ ರಾಜೇಶ್ ಅಂಬಿಗ ಮತ್ತು ದ.ಕ ಜಿಲ್ಲೆಯ ದೀಕ್ಷಾ ಹಾಗೂ ಸಮಗ್ರ ಚಾಂಪಿಯನ್‍ಶಿಪ್ ಗೆದ್ದ ಉತ್ತರ ಕನ್ನಡ ಜಿಲ್ಲೆಯವರಿಗೆ ಅಭಿನಂದನೆಯನ್ನು ಸಲ್ಲಿಸಿದರು.  ಗೆದ್ದವರು ಕ್ರೀಡಾ ಸ್ಪೂರ್ತಿಯಿಂದ ಆಟ ಆಡಿ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಗೆದ್ದು ಬನ್ನಿ ಎಂದು ಹಾರೈಸಿದರು.  ಹೊಸತೊಂದು ಚಿಂತನೆಗೆ ಕೈಹಾಕಿದ ಪೊಲೀಸ್ ಆಯುಕ್ತರಾದ ಡಾ|| ಹರ್ಷ ಅವರಿಗೆ  ಅಭಿನಂದನೆಯನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರಮೇಶ್ ಡೆಪ್ಯೂಟಿ ಕಮಾಂಡೆಂಟ್ ಸ್ವಾಗತಿಸಿದರು. ಜಯಾನಂದ, ಬೆಳ್ತಂಗಡಿ ಪ್ರಭಾರ ಘಟಕಾಧಿಕಾರಿ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ದ.ಕ ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಗೃಹರಕ್ಷಕ ಮತ್ತು ಗೃಹರಕ್ಷಕಿಯರುಗಳು  ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...