ಕಾಬಾ ಭವನಕ್ಕೆ ಅಪಮಾನಿಸಿ ಸಾಮಾಜಿಕ ಜಾಲಾತಾಣದಲ್ಲಿ ಪೋಷ್ಟ್ ಮಾಡಿದ ವ್ಯಕ್ತಿಯ ಬಂಧನ

Source: sonews | By Staff Correspondent | Published on 15th June 2017, 8:20 PM | Coastal News | State News | Special Report | Don't Miss |

ಭಟ್ಕಳ: ಫೆಸ್‌ಬುಕ್ ಹಾಗೂ ವಾಟ್ಸಪ್ ಗಳಲ್ಲಿ ಮುಸ್ಲಿಮರ ಪವಿತ್ರ ಕಾಬಾ ಭವನವನ್ನು ಅವಹೇಳನ ಮಾಡುವ ರೀತಿಯಲ್ಲಿ ಅದರ ಮೇಲೆ ಭಜರಂಗಬಲಿಯ ಫೋಟೋ ಅಂಟಿಸಿ ಭಗವಾ ದ್ವಜಗಳನ್ನು ಹಾಕುವುದರ ಮೂಲಕ ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ವ್ಯಕ್ತಿಯನ್ನು ಜಿಲ್ಲೆಯ ವಿವಿಧ ಸಂಘಟನೆಗಳು ನೀಡಿದ ದೂರಿನ ಆಧಾರದ ಮೇಲೆ ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. 
ಬಂಧಿತ ವ್ಯಕ್ತಿಯನ್ನು ಹೊನ್ನಾವರ ತಾಲೂಕಿನ ವಟ್ಕೆ ಶೀರೂರು ಗ್ರಾಮದ ನಿವಾಸಿ ಜೈವಂತ ನಾಯ್ಕ ಎಂದು ಗುರುತಿಸಲಾಗಿದೆ. ಈತ ಜೂ.೧೨ರಂದು ಪವಿತ್ರ ಕಾಬಾ ಭವನವನ್ನು ತಿರುಚಿ ಅದರ ಮೇಲೆ ಹನುಮಾನ್ ಮೂರ್ತಿಯನ್ನು ಕೂಡಿಸಿ ಸಾಮಾಜಿಕ ಜಾಲಾ ತಾಣದಲ್ಲಿ ಹರಿಯಬಿಟ್ಟಿದ್ದು ಇದರಿಂದಾಗಿ ಮುಸ್ಲಿಮ್ ಧರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿ ಹೊನ್ನಾವರ ಹಾಗೂ ಮುರ್ಡೇಶ್ವರದಲ್ಲಿ ವಿವಿಧ ಮುಸ್ಲಿಮ್ ಸಂಘಟನೆಗಳು, ಯುವಕ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ ವಿಷಯವನ್ನು ಭಟ್ಕಳ ಡಿವೈ‌ಎಸ್ಪಿಯವರ ಗಮನಕ್ಕೂ ತರಲಾಗಿತ್ತು. 
ಬುಧವಾರದಂದು ಮುರುಡೇಶ್ವರ ದ ಖೌಮಿ ತಂಝೀಮ್ ಸದಸ್ಯರು ಪೊಲೀಸ್ ಠಾಣೆಗೆ ತೆರಳಿ ಕಾಬಾವನ್ನು ಅಪವಿತ್ರಗೊಳಿಸುವ ರೀತಿಯಲ್ಲಿ ಚಿತ್ರವನ್ನು ತಿರುಚಿದ್ದು ಇದರಿಂದಾಗಿ ಜಾಗತಿಕ ಮಟ್ಟದಲ್ಲಿ ಮುಸ್ಲಿಮರಲ್ಲಿ ಆಕ್ರೋಶದ ಭಾವನೆ ಮೂಡಿದೆ. ಇದು ಇಸ್ಲಾಂ ಧರ್ಮದ ವಿರುದ್ಧ ಯುದ್ಧ ಸಾರಿದಂತಾಗಿದೆ. ಇಂತಹ ಅಕ್ಷಮ್ಯ ಅರಪಾಧವೆಸಗಿದೆ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರಗಿಸಬೇಕೆಂದು ಆಗ್ರಹಿಸಿದ್ದರು. 
ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತಗೊಂಡ ಹೊನ್ನಾವರ ಪೊಲೀಸರು ಜೈವಂತ ನಾಯ್ಕ ವಿರುದ್ಧ ಧಾರ್ಮಿಕ ಭಾವನೆ ಕೆರಳಿಸಿದ ಆರೋಪದಡಿ ಬಂಧಿಸಿ ಕ್ರಮ ಜರಗಿಸಿದ್ದಾರೆ. 
 

Read These Next

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...

ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು

ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...

ಹುಬ್ಬಳ್ಳಿ-ಧಾರವಾಡ ಕೊಲೆ ಪ್ರಕರಣಗಳು ವರದಿ ಸಲ್ಲಿಸಲು ಎಡಿಜಿಪಿಗೆ ಸೂಚನೆ; ಪರಮೇಶ್ವ‌ರ್

ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪದೇ ಪದೇ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ಕೂಡಲೇ ವರದಿ ಸಲ್ಲಿಸುವಂತೆ ...

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆ; ಆರೋಪಿ ಪರಾರಿ | ಹುಬ್ಬಳ್ಳಿಯಲ್ಲಿ ನಡೆದ ಎರಡನೇ ಬರ್ಬರ ಕೃತ್ಯ

ಹುಬ್ಬಳ್ಳಿಯ ನೇಹಾ ಹಿರೇಮಠ, ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮೀನಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಪ್ರೀತಿ ನಿರಾಕರಿಸಿದ ಕಾರಣಕ್ಕೆ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...

ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...