ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ-2021 ಚುನಾವಣಾ ವೆಚ್ಚ ವೀಕ್ಷಕರ ನೇಮಕ

Source: SO News | By Laxmi Tanaya | Published on 26th August 2021, 9:41 PM | State News | Don't Miss |

ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ವೆಚ್ಚ ವೀಕ್ಷಕರನ್ನು ನೇಮಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.

 ಈ ಕುರಿತು ಪ್ರಕಟಣೆ ನೀಡಿರುವ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 1 ರಿಂದ 41 ರ ವರೆಗಿನ ವಾರ್ಡ್ಗಳ ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ಧಾರವಾಡದ ಸ್ಥಳೀಯ ಲೆಕ್ಕ ಪರಿಶೋಧನಾ ಇಲಾಖೆಯ ಜಂಟಿ ನಿರ್ದೇಶಕಿ ಎಂ.ಪಿ. ಅನಿತಾ ಹಾಗೂ 42 ರಿಂದ 82 ರ ವರೆಗಿನ ವಾರ್ಡ್‍ಗಳಿಗೆ ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಲಲಿತಾ ಲಮಾಣಿ ಅವರನ್ನು ನೇಮಕ ಮಾಡಲಾಗಿದೆ. ಚುನಾವಣಾ ವೆಚ್ಚ ವೀಕ್ಷಕರ ಕಾರ್ಯನಿರ್ವಹಣೆಯು ಆಗಸ್ಟ್ 26 ರಿಂದ ಸೆಪ್ಪೆಂಬರ್ 6 ರ ವರೆಗೆ ಇರುತ್ತದೆ ಎಂದು   ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...