ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ; ಮೇಯರ್, ಉಪ ಮೇಯರ್ ಮೀಸಲಾತಿ ನಿಗದಿಗೊಳಿಸಿ ಜನವರಿ 21, 2021 ರಲ್ಲಿಯೆ ಸರಕಾರದಿಂದ ಆದೇಶ

Source: SO News | By Laxmi Tanaya | Published on 8th September 2021, 8:58 AM | State News | Don't Miss |

ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸೇರಿದಂತೆ ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳ 23 ಅವಧಿಗಾಗಿ ಮೀಸಲಾತಿ ನಿಗದಿಗೊಳಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಫೆಬ್ರವರಿ 11, 2021 ರಂದು ಕರ್ನಾಟಕ ರಾಜ್ಯಪತ್ರದಲ್ಲಿ ವಿಶೇಷ ರಾಜ್ಯಪತ್ರಿಕೆ ಪ್ರಕಟಿಸಲಾಗಿದ್ದು, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಮೇಯರ್  ಮತ್ತು ಉಪಮೇಯರ್ ಸ್ಥಾನಗಳ 23 ಅವಧಿಗಾಗಿ ಮೀಸಲಾತಿಯನ್ನು ನಿಗದಿಪಡಿಸಲಾಗಿದೆ.

  ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮೇಯರ ಸ್ಥಾನವನ್ನು  ಹಿಂದುಳಿದ ವರ್ಗ 'ಎ'  ಮತ್ತು ಉಪಮೇಯರ್ ಸ್ಥಾನವನ್ನು  'ಪರಿಶಿಷ್ಟ ಜಾತಿ ಮಹಿಳೆ' ಗೆ ಮೀಸಲಾತಿ ನಿಗದಿಪಡಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ಸರಕಾರದ ಆದೇಶದಲ್ಲಿ ತಿಳಿಸಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...