ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆಗಳ ಹೆಚ್ಚಳ; ಅಮೆರಿಕ

Source: Vb | By I.G. Bhatkali | Published on 14th April 2022, 7:56 AM | National News | Global News |

ವಾಶಿಂಗ್ಟನ್: ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚುತ್ತಿರುವ ಕುರಿತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್ ಸೋಮವಾರ ಕಳವಳ ವ್ಯಕ್ತಪಡಿಸಿದ್ದಾರೆ.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲೋಲ್ಡ್ ಆಸ್ಟಿನ್, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗಿನ ಜಂಟಿ ಪತ್ರಿಕಾ ವಿವರಣೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

“ಕೆಲವು ಸರಕಾರ, ಪೊಲೀಸ್ ಹಾಗೂ ಕಾರಾಗೃಹದ ಅಧಿಕಾರಿಗಳಿಂದ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚುತ್ತಿರುವುದು ಸೇರಿದಂತೆ ಭಾರತದಲ್ಲಿ ಇತ್ತೀಚೆಗಿನ ಕೆಲವು ಕಳವಳಕಾರಿ ಬೆಳವಣಿಗೆಗಳನ್ನು ನಾವು ಗಮನಿಸುತ್ತಿದ್ದೇವೆ' ಎಂದು ಬ್ಲಿಂಕನ್ ತಿಳಿಸಿದ್ದಾರೆ.

ಆದರೆ, ಮಾನವ ಹಕ್ಕುಗಳ ರಕ್ಷಣೆಯಂತಹ ಪ್ರಜಾಸತ್ತಾತ್ಮಕ ಮೌಲ್ಯಗಳ ಕುರಿತ ಬದ್ಧತೆಯನ್ನು ಭಾರತ ಹಾಗೂ ಅಮೆರಿ ಹಂಚಿಕೊಳ್ಳುತ್ತಿವೆ ಎಂದು ಅವರು ಹೇಳಿದರು. ಜೈಶಂಕರ್ ಹಾಗೂ ಸಿಂಗ್ ಈ ವಿಷಯದ ಕುರಿತು ಯಾವುದೇ ಹೇಳಿಕೆ ನೀಡಲಿಲ್ಲ.

ಆಡಳಿತಾರೂಢ ಡೆಮಾಕ್ರಟಿಕ್ ಪಕದ ಅಮೆರಿಕ ಕಾಂಗ್ರೆಸ್ ಸದಸ್ಯೆ ಇಲ್ದಾನ್ ಉಮರ್, ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಭಾರತ ಸರಕಾರವನ್ನು ಟೀಕಿಸಲು ಯಾಕೆ ಹಿಂದೇಟು ಹಾಕುತ್ತಿರುವಿರೆಂದು ಜೋ ಬೈಡನ್ ಆಡಳಿತವನ್ನು ಪ್ರಶ್ನಿಸಿದ ದಿನಗಳ ಬಳಿಕ ಬ್ಲಿಂಕೆನ್‌ ಈ ಹೇಳಿಕೆ ಹೊರಬಿದ್ದಿದೆ.

ಭಾರತದಲ್ಲಿ ಮುಸ್ಲಿಮರಾಗಿರುವುದೇ ಅಪರಾಧವೆಂಬಂತೆ ಮೋದಿ ಬಿಂಬಿಸುತ್ತಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...