ಮಾನವೀಯತೆ ಮೆರೆಯುತ್ತಿರುವ ಸಮಾಜಸೇವಾ ಸಂಸ್ಥೆಗಳು-ವಿ.ಮೋಹನ್‌ ಕುಮಾರ್‌

Source: sonews | By Staff Correspondent | Published on 20th April 2020, 10:52 PM | State News |

ಶ್ರೀನಿವಾಸಪುರ: ಸಮಾಜ ಸೇವಾ ಸಂಸ್ಥೆಗಳು ಪ್ರತಿ ದಿನ ಬಡವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸುವುದರ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಹೇಳಿದರು.

ಪಟ್ಟಣದಲ್ಲಿ ಸಾಮಾಜಿಕ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ, ವರ್ತಕರ ಸಂಘದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮಮದಲ್ಲಿ ಬಡವರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸಿ ವಿತರಿಸಿ ಮಾತನಾಡಿ, ಕೊರೊನಾ ವೈರಾಣು ತಡೆಯಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ನಿಯಮಾನುಸಾರ ನಡೆದುಕೊಳ್ಳಬೇಕು ಎಂದು ಹೇಳಿದರು.

ಕೊರೊನಾ ತಡೆಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಾಗಿದೆ. ಸ್ಥಳೀಯ ಕವಿಗಳು ಬರೆದಿರುವ ಕೊರೊನಾ ಜಗೃತಿ ಗೀತೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗಿದೆ. ಪ್ರತಿಯೊಬ್ಬರೂ ಮನೆಯಲ್ಲಿಯೇ ಉಳಿದುಕೊಳ್ಳುವ ಮೂಲಕ ಕೋವ ಜಾಮೊ ತಪ್ಪಿಸಬೇಕು ಎಂದು ಹೇಳೀದರು.

ತಾಲ್ಲೂಕು ವರ್ತಕರ ಸಂಘದ ಅಧ್ಯಕ್ಷ ಕೆ.ವಿ.ಸೂರ್ಯನಾರಾಯಣಶೆಟ್ಟಿ, ಕಾರ್ಯದರ್ಶಿ ಆದೆಪ್ಪಶೆಟ್ಟಿ, ಮುಖಂಡರಾದ ಕೆಪಿಆರ್‌ಎಸ್ ಅದ್ಯಕ್ಷ ಪಿ.ಆರ್‌.ಸೂರ್ಯನಾರಾಯಣ, ತಾಲ್ಲೂಕು ಘಟಕದಅಧ್ಯಕ್ಷ ಪಾತಕೋಟ ನವೀನ್‌ ಕುಮಾರ್‌, ಡಾ. ಆರ್‌.ರವಿಕುಮಾರ್‌, ಮುಖಂಡರಾದ ಸುರೇಶ್‌ ಬಾಬು, ಶ್ರೀನಿವಾಸ್‌ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...