ಭಾರತೀಯ ವಾಯುಪಡೆಯ ಮಿಗ್-21 ವಿಮಾನ ಪತನ: ಪೈಲಟ್‌ ಸಾವು

Source: PTI | Published on 21st May 2021, 7:13 PM | National News |

ಮೊಗ (ಪಂಜಾಬ್‌): ಪಂಜಾಬ್‌ನ ಮೊಗ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಮಿಗ್-21 ಬಾಯಿಸನ್ ವಿಮಾನವು ಪತನಗೊಂಡಿದ್ದು, ಭಾರತೀಯ ವಾಯುಪಡೆಯ ಪೈಲಟ್‌ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

‘ಸೂರತ್‌ಗಡದಲ್ಲಿ ಎಂದಿನಂತೆ ತರಬೇತಿ ನಡೆಸುತ್ತಿದ್ದಾಗ ಗುರುವಾರ ತಡರಾತ್ರಿ ವಿಮಾನವು ಮೊಗ ಜಿಲ್ಲೆಯ ಗ್ರಾಮವೊಂದರಲ್ಲಿ  ಪತನಗೊಂಡಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಲಾಗಿದೆ’ ಎಂದು ಅವರು ಹೇಳಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಭಾರತೀಯ ವಾಯುಪಡೆ(ಐಎಎಫ್‌),‘ಪಶ್ಚಿಮ ವಲಯದಲ್ಲಿ ಗುರುವಾರ ತಡರಾತ್ರಿ ಐಎಎಫ್‌ನ ಮಿಗ್-21  ಯುದ್ಧವಿಮಾನವು ಪತನಗೊಂಡಿದೆ. ಈ ವೇಳೆ ಪೈಲಟ್‌ ಸ್ಕ್ವಾಡ್ರನ್ ಲೀಡರ್‌ ಅಭಿನವ್‌ ಚೌಧರಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರ ಕುಟುಂಬದವರಿಗೆ ಸದಾ ನಮ್ಮ ಬೆಂಬಲ ಇರುತ್ತದೆ’ ಎಂದು ಐಎಎಫ್‌ ಹೇಳಿದೆ

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...