ಐಸಿಎಸ್‍ಇ ಹತ್ತನೇ ತರಗತಿ ಪರೀಕ್ಷೆ ಭಟ್ಕಳ ತಾಲೂಕಿಗೆ ಶೇ.100 ಫಲಿತಾಂಶ

Source: sonews | By Staff Correspondent | Published on 7th May 2019, 5:35 PM | Coastal News | Don't Miss |

ಭಟ್ಕಳ: ಫೆಬ್ರವರಿ ತಿಂಗಳಲ್ಲಿ ಜರಗಿದ ಐಸಿಎಸ್‍ಇ ಹತ್ತನೇ ತರಗತಿ ಪರೀಕ್ಷೆ ಫಲಿತಾಂಶ ಮಂಗಳವಾರ ಸಂಜೆ ಪ್ರಕಟಗೊಂಡಿದ್ದು ಭಟ್ಕಳ ತಾಲೂಕು ಶೇ.100 ಫಲಿತಾಂಶ ದಾಖಲಿಸಿದೆ. 

ಐಸಿಎಸ್‍ಇ Indian Certificate of Secondary Education (ICSE)  ಇಂಡಿಯನ್ ಸರ್ಟಿಫಿಕೇಟ್ ಆಫ್ ಸೆಂಕಡರಿ ಎಜ್ಯುಕೇಶನ್ ಪಠ್ಯಕ್ರಮಧಾರಿತ ಮೂರು ಶಾಲೆಗಳು ಭಟ್ಕಳ ತಾಲೂಕಿನಲ್ಲಿದ್ದು ಭಟ್ಕಳದ ಸಾಗರ ರಸ್ತೆಯಲ್ಲಿರುವ ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ಕಳೆದ 5 ವರ್ಷಗಳಿಂದ ಶೇ.100 ಫಲಿತಾಂಶ ದಾಖಲಿಸುತ್ತ ಬಂದಿದೆ.

ಈ ಬಾರಿಯ ಪರೀಕ್ಷೆಯಲ್ಲಿಯೂ ಶೇ.100 ಫಲಿತಾಂಶ ಬಂದಿದ್ದು ವಿನುತಾ ಭಟ್ 96.33% ಅಂಕಗಳನ್ನು ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ ಹಾಗೂ ನೀರಜ್ ನಾಯಕ್ 91.66%, ರೋಹಿತ್ ಮಹಾಲೆ 91.16% ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಕಳೆದ 3 ವರ್ಷಗಳಿಂದ ಶೇ.100 ಫಲಿತಾಂಶ ದಾಖಲಿಸುತ್ತ ಬಂದಿರುವ ಜಾಮಿಯಾಬಾದ್ ರಸ್ತೆಯ ನ್ಯೂ ಶಮ್ಸ್ ಸ್ಕೂಲ್ ಶಾಲೆಯು ಈ ಬಾರಿಯೂ ಶೇ.100 ಫಲಿತಾಂಶ ದಾಖಲಿಸಿದೆ. ಈ ಶಾಲೆಯ ರಾಬಿಯಾ ಮಲಿಹಾ ಶೇ.95.6 ಅಂಕಗಳನ್ನು ಪಡೆಯುವುದರ ಮೂಲಕ ತಾಲೂಕಿಗೆ ದ್ವಿತೀಯಾ ಸ್ಥಾನವನ್ನು ಪಡೆದುಕೊಂಡಿದ್ದಾಳೆ. 

            

Rabia Maliha      Asim wadood

ಮುರುಡೇಶ್ವರದ ಬೀನಾ ವೈದ್ಯ ಶಾಲೆಯು ಮೊದಲ ಬಾರಿಗೆ ಪರೀಕ್ಷೆಯನ್ನು ಎದುರಿಸಿದ್ದು ಶೇ.100 ಫಲಿತಾಂಶವನ್ನು ದಾಖಲಿಸಿದೆ. ಈ ಶಾಲೆಯ ಸುದೀಪ್ ವೆಂಕಟೇಶ್ ನಾಯ್ಕ ಶೇ.93.8 ಅಂಕ ಪಡೆಯುವುದರ ಮೂಲಕ ತಾಲೂಕಿಗೆ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾನೆ. 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...