ಐ.ಸಿ.ಎಸ್.ಇ ೧೦ನೇ ತರಗತಿ ಫಲಿತಾಂಶ ಪ್ರಕಟ; ನ್ಯೂ ಶಮ್ಸ್ ಸ್ಕೂಲ್ ಶೇ.೧೦೦ ಫಲಿತಾಂಶ

Source: SOnews | By Staff Correspondent | Published on 6th May 2024, 2:57 PM | Coastal News | Don't Miss |

ಭಟ್ಕಳ: ನಗರದ ಪ್ರತಿಷ್ಟಿತ ತರಬಿಯತ್ ಎಜ್ಯುಕೇಶನ್ ಸೂಸೈಟಿ ಯಿಂದ ನಡೆಸಲ್ಪಡುತ್ತಿರುವ ಐ.ಸಿ.ಎಸ್.ಇ ಪಠ್ಯಕ್ರಮದ ನ್ಯೂಶಮ್ಸ್ ಸ್ಕೂಲ್ ಶಾಲೆಯ ಸತತವಾಗಿ ೮ ವರ್ಷಗಳಿಂದ ಶೇ.೧೦೦ ಫಲಿತಾಂಶ ನೀಡುತ್ತಿದೆ.

ಫೆಬ್ರವರಿ ತಿಂಗಳಲ್ಲಿ ಜರುಗಿದ ೨೦೨೩-೨೪ನೇ ಸಾಲಿನ ಹತ್ತನೇ ತರಗತಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು ಈ ಬಾರಿಯೂ ಶೇ.೧೦೦ ಫಲಿತಾಂಶ ದಾಖಲಿಸಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ಲಿಯಾಕತ್ ಅಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಟ್ಟು ೮೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ೨೮ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, ೩೬ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡಿದ್ದಾರೆ. ಶೇ. ೯೭ ಅಂಕ ಪಡೆಯುವುದರ ಮೂಲಕ ಅಸ್ರಾ ಮುಅಲ್ಲಿಮ್ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ರುಖಿಯಾ ಇಫ್ಲಾಹ್ ಅಸ್ಕೆರಿ ಶೇ.೯೬%, ಅತ್ಫಾ ಸಿದ್ದೀಖಿ ಶೇ,೯೫% ಅಂಕಗಳನ್ನು ಗಳಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಸ್ಕೂಲ್ ಬೋರ್ಡ್ ಚೇರ‍್ಮನ್ ಇಂಜಿನೀಯರ್ ನಝೀರ್ ಆಹ್ಮದ್ ಖಾಝಿ, ಉಪಾಧ್ಯಕ್ಷ ಸೈಯ್ಯದ್ ಖುತುಬ್ ಬರ್ಮಾವರ್ ನದ್ವಿ ಹಾಗೂ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಅಭಿನಂದಿಸಿದ್ದಾರೆ.

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...