ಹೊಸ ಮರಳು ನೀತಿ-2020ರ ಅನ್ವಯ ಮರಳು ನಿಕ್ಷೇಪ ಗುರುತಿಸಿ: ಡಿಸಿ  

Source: sonews | By Staff Correspondent | Published on 22nd October 2020, 10:46 PM | Coastal News |

ಕಾರವಾರ: ಹೊಸ ಮರಳು ನೀತಿ-2020ರ ಅನ್ವಯ ಜಿಲ್ಲೆಯ ಹಳ್ಳ, ಕೊಳ್ಳ, ನದಿ ಹಾಗೂ ಅಣೆಕಟ್ಟಿನ ಹಿನ್ನಿರಿನಲ್ಲಿ ಲಭ್ಯವಿರುವ ಮರಳು ನಿಕ್ಷೇಪವನ್ನು ಗುರುತಿಸುವ ಕಾರ್ಯವನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಎಸಿ, ತಹಶೀಲ್ದಾರ ಹಾಗೂ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿ, ಈ ಹೊಸ ಮರಳು ನೀತಿ ಬಡವರಿಗೆ ಮತ್ತು ಸ್ಥಳೀಯರಿಗೆ ದೊರೆಯಬೇಕೆಂಬ ಉದ್ದೇಶದಿಂದ ಮಾಡಲಾಗಿರುವುದರಿಂದ ಹಳ್ಳ, ಕೊಳ್ಳ, ನದಿ, ಅಣೆಕಟ್ಟಿನ ಹಿನ್ನೀರಿನಲ್ಲಿರುವ ಮರಳು ನಿಕ್ಷೇಪಗಳನ್ನು ಗುರುತಿಸಿ ಅರ್ಹರಿಗೆ ಮರಳು ದೊರಕುವಂತೆ ಮಾಡಿ ಸ್ಥಳೀಯ ಅಧಿಕಾರಿಗಳ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಮರಳು ಸಾಗಾಣಿಕೆ ಬಿಸಿನೆಸ್ ಆಗಿ ಮಾರ್ಪಾಡುಗೊಳ್ಳಬಾರದೆಂದು ಅವರು ಖಡಕ್ ಆಗಿ ಸೂಚಿಸಿದರು.

ರಾಜ್ಯದ ಭೌಗೋಳಿಕ, ಭೂವೈಜ್ಞಾನಿಕ ಮತ್ತು ಆಡಳಿತಾತ್ಮಕ ಹಿನ್ನೆಲೆಯನ್ನು ಪರಿಗಣಿಸಿ ಸರ್ಕಾರಿ ಮತ್ತು ಸಾರ್ವಜನಿಕ ನಿರ್ಮಾಣ ಕಾಮಗಾರಿಗಳಿಗೆ ನಿಯಮಿತವಾಗಿ ಮತ್ತು ಸುಲಭವಾಗಿ ಕೈಗೆಟುಕುವ ದರದಲ್ಲಿ ಮರಳು ದೊರೆಯುವಂತೆ ಮತ್ತು ಪರಿಸರಕ್ಕೆ ಧಕ್ಕೆಯಾಗದಂತೆ ವೈಜ್ಞಾನಿಕವಾಗಿ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲು ಹಳ್ಳ, ನದಿ, ಕೆರೆ, ಅಣೆಕಟ್ಟು ಮತ್ತು ಅಣೆಕಟ್ಟಿನ ಹಿನ್ನೀರಿನ ನದಿಪಾತ್ರದಲ್ಲಿನ ಮರಳು ನಿಕ್ಷೇಪಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲು ಹೊಸ ಮರಳು ನೀತಿಯನ್ನು ಪ್ರಸ್ಥಾಪಿಸಲಾಗಿರುತ್ತದೆ.

ಈ ಪ್ರಸ್ತಾವನೆಯಂತೆ ಮೊದಲನೇ, ಎರಡನೇ ಮತ್ತು ಮೂರನೇ ಶ್ರೇಣಿಯ ಹಳ್ಳ ಮತ್ತು ಕೆರೆಗಳಲ್ಲಿ ಲಭ್ಯವಿರುವ ಮರಳು ನಿಕ್ಷೇಪಗಳನ್ನು ಕಂದಾಯ, ಅರಣ್ಯ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಗುರುತಿಸಬೇಕು. ನಾಲ್ಕು, ಐದು ಮತ್ತು ಆರನೇ ಕ್ರಮಾಂಕದ ಹೊಳೆ ನದಿ ಜಲಾಶಯ ಹಾಗೂ ಅಣೆಕಟ್ಟಿನ ಹಿನ್ನೀರಿನ ನದಿಪಾತ್ರದಲ್ಲಿನ ಮರಳು ನಿಕ್ಷೇಪಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಜಲಸಂಪನ್ಮೂಲ ಇಲಾಖೆ, ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಬೇಕು. ತಾಲೂಕು ವ್ಯಾಪ್ತಿಗಳಲ್ಲಿ ಬರುವ ಹಳ್ಳ, ತೊರೆ, ಕರೆ, ಹೊಳೆ ಮತ್ತು ಅಣೆಕಟ್ಟಿನ ಹಿನ್ನೀರಿನ ನದಿಪಾತ್ರಗಳಲ್ಲಿ ಹೊಸ ಮರಳು ನೀತಿ-2020ರ ಆದೇಶದಲ್ಲಿ ತಿಳಿಸಿರುವ ಅಂಶಗಳನ್ವಯ ಮರಳು ನಿಕ್ಷೇಪಗಳನ್ನು ಗುರುತಿಸಿ, ತಾಲೂಕು ಮರಳು ಉಸ್ತುವಾರಿ ಸಮಿತಿ ಮೂಲಕ ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಅನುಮೋದನೆಯೊಂದಿಗೆ ತೆರವುಗೊಳಿಸುವಿಕೆಗೆ ಕ್ರಮವಹಿಸಬೇಕಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್, ಎಸಿ ಪ್ರಿಯಾಂಗಾ ಎಂ ಹಾಗೂ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಾದ ಸೋಮಶೇಖರ ಎಂ ಅವರು ಸೇರಿದಂತೆ ಉಪಸ್ಥಿತರಿದ್ದರು. 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...