ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ, ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಶಿಕ್ಷೆ!

Source: PTI | Published on 7th July 2020, 12:13 AM | National News | Don't Miss |

 

ಗ್ವಾಲಿಯರ್: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತದೆ.
ಹೌದು.. ಕೊರೋನಾ ಸಾಂಕ್ರಾಮಿಕ ಸಂಕಷ್ಟದಲ್ಲಿರುವ ಭಾರತದಲ್ಲಿ ಸರ್ಕಾರ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ವಹಿಸಿದರೂ ಸಾರ್ವಜನಿಕರ ಬೆಂಬಲವಿಲ್ಲದೇ ಭಾರತ ಕೊರೋನಾ ವಿರುದ್ಧದ ಹೋರಾಟದಲ್ಲಿ ಹಿಂದೆ ಬೀಳುತ್ತಿದೆ. ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಸೇರಿದಂತೆ ಸಾಕಷ್ಟು ವಿಚಾರಗಳನ್ನು ಜನ ಮರೆಯುತ್ತಿದ್ದಾರೆ. ಇದೇ ಕಾರಣಕ್ಕೆ ಮಧ್ಯಪ್ರದೇಶದಲ್ಲಿ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಅಂತಹ ವ್ಯಕ್ತಿಗಳನ್ನು ಆಸ್ಪತ್ರೆಗಳಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುವ ಶಿಕ್ಷೆ ವಿಧಿಸುತ್ತಿದೆ. ಕೇವಲ ಆಸ್ಪತ್ರೆ ಮಾತ್ರವಲ್ಲದೇ ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿಯೂ ಇವರನ್ನು ಸ್ವಯಂಸೇವಕರಾಗಿ ಕೆಲಸ ಮಾಡಲು ನಿಯೋಜಿಸಲಾಗುತ್ತಿದ್ದು, ಇದರ ಜೊತೆಗೆ ದಂಡ ಕೂಡ ಹಾಕಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಗ್ವಾಲಿಯರ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಅವರು, ಕೊರೋನಾ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಜನರಿಂದ ಮಾರ್ಗದರ್ಶಿ ಸೂತ್ರಗಳ ಪಾಲನೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಸರ್ಕಾರ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೂ ಸಾರ್ವಜನಿಕರು ಅದಕ್ಕೆ ಬೆಂಬಲ ನೀಡದ ಹೊರತು ಅದು ಯಶಸ್ವಿಯಾಗುವುದಿಲ್ಲ. ಇದೇ ಕಾರಣಕ್ಕೆ ಹಾಲಿ ಇರುವ ನಿಯಮಗಳನ್ನೇ ಇನ್ನೂ ಕಠಿಣ ಮಾಡಲಾಗುತ್ತಿದೆ.
ಅದರ ಮೊದಲ ಭಾಗವಾಗಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಅಂತಹವರನ್ನು ಕನಿಷ್ಟ 3 ದಿನಗಳ ಕಾಲ ಆಸ್ಪತ್ರೆಗಳಲ್ಲಿ , ಫೀವರ್ ಕ್ಲಿನಿಕ್ ಗಳಲ್ಲಿ ಮತ್ತು ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತದೆ. ಇದರ ಜೊತೆಗೆ ದಂಡ ಕೂಡ ಕಟ್ಟಬೇಕಾಗುತ್ತದೆ.  ಇದೇ ವೇಳೆ ಇಂದೋರ್, ಭೋಪಾಲ್, ಮತ್ತು ಇತರೆ ರಾಜ್ಯಗಳಿಂದ ಗ್ವಾಲಿಯರ್ ಗೆ ಆಗಮಿಸುವವರನ್ನು ಗಡಿಯಲ್ಲೇ ಕಡ್ಡಾಯವಾಗಿ ಸ್ಕ್ರೀನಿಂಗ್ ಗೆ ಒಳಪಡಿಸಬೇಕು ಎಂದು ಆದೇಶಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...