ಅನುಮತಿಯಿಲ್ಲದೇ ಸಭೆ ಸಮಾರಂಭ ನಡೆಸಿದಲ್ಲಿ ಪ್ರಕರಣ ದಾಖಲು- ಜಿಲ್ಲಾಧಿಕಾರಿ ಜಿ. ಜಗದೀಶ್

Source: so news | Published on 8th July 2020, 12:21 AM | Coastal News | Don't Miss |


ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 Posiಣive ಪ್ರಕರಣಗಳು ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವುದು ಗಂಭೀರದ ವಿಷಯವಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಪೂರ್ವಾನುಮತಿ ಇಲ್ಲದೆ, ನಿಯಮ ಬಾಹಿರವಾಗಿ ಹುಟ್ಟುಹಬ್ಬದ ಆಚರಣೆ, ಮೆಹಂದಿ ಕಾರ್ಯಕ್ರಮಗಳು, ಸನ್ಮಾನ ಕಾರ್ಯಕ್ರಮ ಮುಂತಾದವುಗಳು ನಡೆಯುತ್ತಿದ್ದು, ಇಂತಹ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂಬ ಅಂಶವನ್ನು ಸಂಘಟಕರು ಅರಿತುಕೊಳ್ಳಬೇಕು. ಇಂತಹ ಕಾರ್ಯಕ್ರಮಗಳು ಕೋವಿಡ್ -19ನ್ನು ಹರಡುವಂತಹದಾಗಿದ್ದು, ಈ ಕಾರ್ಯಕ್ರಮಗಳ ಸಂಘಟಕರ ಮೇಲೆ ಕಡ್ಡಾಯವಾಗಿ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಪೂರ್ವಾನುಮತಿಯ ಮೇರೆಗೆ ಜರುಗುವ ಮದುವೆ / ಇತರೆ ಸಭೆ ಸಮಾರಂಭ, ಸನ್ಮಾನ ಇತ್ಯಾದಿ ಕಾರ್ಯಕ್ರಮಗಳಲ್ಲಿ ಸರ್ಕಾರದ ಆದೇಶದನ್ವಯ , ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಗ್ಲೌಸ್, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಶುಚಿತ್ವ ಕಾಪಾಡಿಕೊಳ್ಳುವಿಕೆಗೆ ಹಾಗೂ  ಇತರ ಎಸ್.ಓ.ಪಿ. ಕ್ರಮಗಳು ಯಥಾ ರೀತಿಯಲ್ಲಿ  ಪಾಲನೆಯಾಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಲು ಸಂಬAಧಿಸಿದ ತಹಶೀಲ್ದಾರರು/ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಗಳು/ ಉಡುಪಿ ನಗರಸಭೆ ಪೌರಾಯುಕ್ತರು / ಮುಖ್ಯಾಧಿಕಾರಿಗಳು/ ಗ್ರಾಮ ಲೆಕ್ಕಾಧಿಕಾರಿಗಳು/ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು/ ಹಾಗೂ ಆಯಾ ಇಲಾಖಾ ಸಿಬ್ಬಂದಿ ವರ್ಗದವರು ಖುದ್ದಾಗಿ ಭೇಟಿ ನೀಡಿ ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...