ಕಾರವಾರದಲ್ಲಿ ಅಕ್ರಮ ಮದ್ಯ ಸಾಗಾಟ. ಓರ್ವನ ಬಂಧನ.

Source: SO News | By Laxmi Tanaya | Published on 29th October 2020, 7:22 AM | Coastal News |

ಕಾರವಾರ : ಗೋವಾದಿಂದ ಸಮುದ್ರ ಮಾರ್ಗದ ಮೂಲಕ  ಮದ್ಯ ಸಾಗಾಟ ಮಾಡುತ್ತಿರುವ ವೇಳೆ ಪೊಲೀಸರು ದಾಳಿ ನಡೆಸಿದ ಘಟನೆ ಕಾರವಾರ ತಾಲೂಕಿನ ಕಡವಾಡದಲ್ಲಿ ನಡೆದಿದೆ. 

ದೋಣಿಯ ಮುಲಕ ಮದ್ಯ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಕಡವಾಡದ ರೋಶನ್ ಬಾಂದೇಕರ್ ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.  ಗೋವಾದಿಂದ ಸಮುದ್ರ ಮಾರ್ಗವಾಗಿ ದೋಣಿ ಮೂಲಕ ತಂದಿದ್ದ ಅಕ್ರಮ ಗೋವಾ ಮದ್ಯವನ್ನು ಸಾಗಿಸಲು ಯತ್ನಿಸುತ್ತಿರುವಾಗ ಪೊಲೀಸರು ದಾಳಿ ನಡೆಸಿದ್ದರು. 

ಸುಮಾರು16 ಸಾವಿರ ಮೌಲ್ಯದ 85 ಲೀಟರ್ ಮದ್ಯ ಸಹಿತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಸಿಪಿಐ ಸಂತೋಷ ಕುಮಾರ ಅವರ ಮಾರ್ಗದರ್ಶನದಲ್ಲಿ ಪಿಎಸೈ ರೇವಣಸಿದ್ದಪ್ಪ ದಾಳಿ ನಡೆಸಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...