ಅಕ್ರಮ ಶ್ರೀಗಂಧ ಸಾಗಣೆ : ಐವರ ಬಂಧನ

Source: SO News | By Laxmi Tanaya | Published on 9th January 2021, 8:19 AM | State News |

ಧಾರವಾಡ : ಅಪಾರ ಪ್ರಮಾಣದ ಶ್ರೀಗಂಧವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಧಾರವಾಡ ವಲಯದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಕರ್ನಾಟಕ ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿ , ಸುಮಾರು 40 ಲಕ್ಷ ರೂ.ಮೌಲ್ಯದ , 370 ಕೆ.ಜಿ.ತೂಕದ ಶ್ರೀಗಂಧ ಸಾಗಿಸುತ್ತಿದ್ದ ಐವರನ್ನು ಜ.6 ರಂದು  ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಿಂದ ಶ್ರೀಗಂಧ ಹಾಗೂ ಅದನ್ನು ಸಾಗಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಹಾವೇರಿ,ಚಿತ್ರದುರ್ಗ ಹಾಗೂ ಹುಬ್ಬಳ್ಳಿಯ ಗಬ್ಬೂರ ಕ್ರಾಸ್ ಬಳಿ ಕಾರ್ಯಾಚರಣೆ  ಈ ಐದು ಜನರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಖನದಾಳ ಗ್ರಾಮದ ಪರಸಪ್ಪ ಭಜಂತ್ರಿ,ಮಾರುತಿ ಭಜಂತ್ರಿ, ಕಲ್ಲಪ್ಪ ಶಿಂಧೆ, ಮಹದೇವ ಮಾಂಗ ಹಾಗೂ ಮೂಡಲಗಿಯ ರಾಜು ಭಜಂತ್ರಿ ಎಂದು ಗುರುತಿಸಲಾಗಿದೆ.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ , ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕೆಂಚಪ್ಪನವರ ಅವರ ಮರ‍್ಗರ‍್ಶನದಲ್ಲಿ, ವಲಯ ಅರಣ್ಯಾಧಿಕಾರಿ ಆರ್.ಎಸ್.ಉಪ್ಪಾರ , ಅರಣ್ಯ ರಕ್ಷಕರಾದ ಡಿ.ಪಿ.ಮಣಕೂರ, ಎಂ.ಡಿ.ಲಮಾಣಿ, ಜಿ.ಎಂ.ಕಾಂಬಳೆ,ಸಿ.ಎಸ್.ರೊಟ್ಟಿ , ಸಿಬ್ಬಂದಿ ರ‍್ಗದ ವಿಠ್ಠಲ ಜೋನಿ, ರಘು ,ರಂಗಪ್ಪ ಕೋಳಿ,ಕಲ್ಲಪ್ಪ, ಎಸ್.ಪಿ.ಹಿರೇಮಠ, ಶಿವರಾಮ ಚವ್ಹಾಣ, ರಾಜೇಂದ್ರ, ಚಾಂದಬಾಷಾ ಮುಲ್ಲಾ ಮತ್ತಿತರರು ಈ ಕರ‍್ಯಾಚರಣೆ ಕೈಗೊಂಡಿದ್ದರು. ಈ ಕಾರ‍್ಯಾಚರಣೆಗೆ ಪೊಲೀಸ್ ಇಲಾಖೆಯು ತಾಂತ್ರಿಕ ಸಹಕಾರ ನೀಡಿದೆ , ತನಿಖೆ ಮುಂದುವರೆದಿದೆ.

 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...