ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜೂನ್‌ 18ಕ್ಕೆ ದೇಶವ್ಯಾಪಿ ಪ್ರತಿಭಟನೆ

Source: ANI | By MV Bhatkal | Published on 12th June 2021, 7:52 PM | National News | Don't Miss |

ನವದೆಹಲಿ: ವೈದ್ಯರ ಮೇಲಿನ ಹಲ್ಲೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘವು ಇದೇ 18ರಂದು ‘ರಕ್ಷಕರನ್ನು ಉಳಿಸಿ’ ಎಂಬ ಘೋಷಣೆಯೊಂದಿಗೆ ದೇಶದಾದ್ಯಂತ ಪ್ರತಿಭಟನೆ ನಡೆಸಲಿದೆ.
ಆರೋಗ್ಯ ಕ್ಷೇತ್ರದ ವೃತ್ತಿಪರರನ್ನು ಗುರಿಯಾಗಿಸಿಕೊಂಡು ನಡೆಸುವ ಹಿಂಸಾಚಾರದ ವಿರುದ್ಧ ಕಪ್ಪು ಪಟ್ಟಿ, ಮಾಸ್ಕ್‌, ರಿಬ್ಬನ್, ಶರ್ಟ್ ಧರಿಸಿ ಮತ್ತು ಜಾಗೃತಿ ಅಭಿಯಾನ ಮೂಡಿಸುವ ಮೂಲಕ ಪ್ರತಿಭಟನೆ ನಡೆಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘವು ತನ್ನ ಎಲ್ಲ ರಾಜ್ಯ ಮತ್ತು ಸ್ಥಳೀಯ ಶಾಖೆಗಳಿಗೆ ಸೂಚನೆ ನೀಡಿದೆ.
ಅಸ್ಸಾಂ, ಬಿಹಾರ, ಪಶ್ಚಿಮ ಬಂಗಾಳ, ದೆಹಲಿ, ಉತ್ತರ ಪ್ರದೇಶ, ಕರ್ನಾಟಕ ಮತ್ತು ಇತರ ಸ್ಥಳಗಳಲ್ಲಿ ಕಳೆದ ಎರಡು ವಾರಗಳಲ್ಲಿ ವೈದ್ಯರ ಮೇಲೆ ನಡೆದ ಸರಣಿ ಹಿಂಸಾಚಾರಗಳು ಅತ್ಯಂತ ಘಾಸಿಗೊಳಿಸುವಂತದ್ದು ಎಂದು ಐಎಂಎ ಹೇಳಿದೆ.
ಐಎಂಎಯ ಕ್ರಿಯಾ ಸಮಿತಿಯು, ವೈದ್ಯಕೀಯ ವೃತ್ತಿಯ ಮೇಲೆ ಮತ್ತು ವೃತ್ತಿಪರರ ಮೇಲಿನ ಆಕ್ರಮಣ ನಿಲ್ಲಿಸುವ ಬೇಡಿಕೆಯೊಂದಿಗೆ ‘ರಕ್ಷಕರನ್ನು ರಕ್ಷಿಸಿ’ ಘೋಷಣೆ ಹಾಕಲು ನಿರ್ಧರಿಸಿದೆ. ಅಲ್ಲದೇ ವೈದ್ಯರು ತಮ್ಮ ಕಾಳಜಿ, ಆಕ್ರೋಶ ಮತ್ತು ಒಗ್ಗಟ್ಟನ್ನು ವ್ಯಕ್ತಪಡಿಸಲು ಜೂನ್ 18ರಂದು ರಾಷ್ಟ್ರೀಯ ಪ್ರತಿಭಟನಾ ದಿನವಾಗಿ ಆಚರಿಸಲು ನಿರ್ಧರಿಸಿದೆ ಎಂದು ಅದು ತಿಳಿಸಿದೆ.
ಅಲ್ಲದೇ ಜೂನ್ 15 ಅನ್ನು ರಾಷ್ಟ್ರೀಯ ಬೇಡಿಕೆಯ ದಿನವಾಗಿ ಆಚರಿಸಲಾಗುವುದು ಮತ್ತು ಅಂದು ದೇಶದಾದ್ಯಂತ ಐಎಂಎ ಶಾಖೆಗಳಿಂದ ಪತ್ರಿಕಾಗೋಷ್ಠಿ ನಡೆಸಲಾಗುವುದು ಎಂದು ಹೇಳಿದೆ.

 

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...

ಕಾರವಾರ : ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ

ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ 2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಜಿಲ್ಲೆಯಾದ್ಯಂತ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...