ಹೊಸದಿಲ್ಲಿ: ಕೊರೋನದಿಂದ ಅನಾಥರಾದ ಮಕ್ಕಳಿಗೆ ಕೂಡಲೇ ಪರಿಹಾರ ಕಲ್ಪಿಸಿ: ಸುಪ್ರೀಂ ಕೋರ್ಟ್

Source: VB News | By S O News | Published on 29th May 2021, 7:56 PM | National News |

ಹೊಸದಿಲ್ಲಿ: ಕೊರೋನ ಸಾಂಕ್ರಾಮಿಕ ರೋಗದಿಂದ ಹೆತ್ತವರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳ ಬಗ್ಗೆ ಶುಕ್ರವಾರ ಗಮನ ಸೆಳೆದಿರುವ ಸುಪ್ರೀಂ ಕೋರ್ಟ್, ಈ ಮಕ್ಕಳಿಗೆ ತತ್ ಕ್ಷಣ ಪರಿಹಾರ ಒದಗಿಸುವಂತೆ ರಾಜ್ಯ ಸರಕಾರಗಳಿಗೆ ನಿರ್ದೇಶಿಸಿದೆ.

ನ್ಯಾಯಮೂರ್ತಿಗಳಾದ ಎಲ್.ಎನ್. ರಾವ್ ಹಾಗೂ ಅನಿರುದ್ಧ ಬೋಸ್ ಅವರನ್ನು ಒಳಗೊಂಡ ರಜಾಕಾಲದ ಪೀಠ, ಕೊರೋನ ಸೋಂಕಿನಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳನ್ನು ಗುರುತಿಸುವಂತೆ ಹಾಗೂ ಅವರ ಬಗೆಗಿನ ಸಮಗ್ರ ಮಾಹಿತಿಯನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ ಸಿಪಿಸಿಆರ್)ದ ವೆಬ್‌ಸೈಟ್‌ಗೆ ಶನಿವಾರ ಸಂಜೆಯೊಳಗೆ ಅಪ್‌ಲೋಡ್ ಮಾಡುವಂತೆ ಆಯಾ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದೆ.

ಕೊರೋನದಿಂದ ಹೆತ್ತವರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳನ್ನು

ಮಹಾರಾಷ್ಟ್ರದಲ್ಲಿ ಕೊರೋನ ಸೋಂಕಿನಿಂದ 2,900 ಮಕ್ಕಳು ತಮ್ಮ ಒಬ್ಬರು ಅಥವಾ ಇಬ್ಬರು ಹೆತ್ತವರನ್ನು ಕಳೆದುಕೊಂಡಿರುವುದರ ಬಗ್ಗೆ ನಾವು ಓದಿದ್ದೇವೆ. ಅಂತಹ ಮಕ್ಕಳ ಖಚಿತ ಸಂಖ್ಯೆಯ ಬಗ್ಗೆ ನಮಗೆ ತಿಳಿದಿಲ್ಲ. ಕೊರೋನ ಸೋಂಕಿನಿಂದಾಗಿ ಹೆತ್ತವರನ್ನು ಕಳೆದುಕೊಂಡ ಎಷ್ಟು ಮಕ್ಕಳು ಈ ಬೃಹತ್ ದೇಶದಲ್ಲಿ ಇದ್ದಾರೆ ಎಂದು ನಮಗೆ ಕಲ್ಪಿಸಲೂ ಸಾಧ್ಯವಿಲ್ಲ.

ಸುಪ್ರೀಂ ಕೋರ್ಟ್

ಗುರುತಿಸುವಂತೆ ಹಾಗೂ ಅವರಿಗೆ ರಾಜ್ಯ ಸರಕಾರದಿಂದ ತತ್ ಕ್ಷಣ ಪರಿಹಾರ ಒದಗಿಸುವಂತೆ ಕೋರಿ ಆ್ಯಮಿಕಸ್ ಕ್ಯೂರಿ ಗೌರವ್ ಅಗರ್ವಾಲ್ ಅವರು ಸಲ್ಲಿಸಿದ ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಈ ನಿರ್ದೇಶನ ನೀಡಿದೆ.

ಬೀದಿಗಳಲ್ಲಿ ಹಸಿವಿನಿಂದ ಬಳಲುತ್ತಿರುವ ಮಕ್ಕಳ ಸಂಕಟವನ್ನು ನೀವು ಅರ್ಥ ಮಾಡಿಕೊಳ್ಳುತ್ತೀರಿ ಎಂದು ಭಾವಿಸುತ್ತೇನೆ. ಈ ಮಕ್ಕಳ ಮೂಲಭೂತ ಅವಶ್ಯಕತೆಗಳನ್ನು ಕೂಡಲೇ ಈಡೇರಿಸುವಂತೆ ರಾಜ್ಯ ಸರಕಾರಕ್ಕೆ ವಿನಂತಿಸಿ ಎಂದು ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರಗಳ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರಿಗೆ ಪೀಠ ತಿಳಿಸಿತು.

ಕೊರೋನದಿಂದ ಹೆತ್ತವರನ್ನು ಕಳೆದುಕೊಂಡು ಅನಾಥರಾದ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರಕಾರಗಳು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರ ಈಗಾಗಲೇ ಸೂಚಿಸಿದೆ ಎಂದು ನ್ಯಾಯಪೀಠ ಗಮನ ಸೆಳೆಯಿತು.
 

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...