3 ವಾರಗಳಲ್ಲಿ ಬ್ಲಾಕ್ ಫಂಗಸ್ ಗೆ 2100 ಮಂದಿ ಸಾವು, ಸೋಂಕಿತರ ಪ್ರಮಾಣ ಶೇ.150ರಷ್ಟು ಏರಿಕೆ

Source: ANI | By MV Bhatkal | Published on 12th June 2021, 1:05 PM | National News |

ನವದೆಹಲಿ: ದೇಶದಲ್ಲಿ ಮಾರಕ ಬ್ಲಾಕ್ ಫಂಗಸ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಪ್ರಮಾಣದಲ್ಲಿ ಶೇ.150ರಷ್ಟು ಏರಿಕೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 31 ಸಾವಿರಕ್ಕೆ ಏರಿಕೆಯಾಗಿದೆ.
ಅಂತೆಯೇ ಬ್ಲಾಕ್ ಫಂಗಸ್ ನಿಂದಾಗಿ ಸಾವನ್ನಪ್ಪಿದವರ ಪ್ರಮಾಣದಲ್ಲಿ ಶೇ.50ರಷ್ಟು ಏರಿಕೆಯಾಗಿದ್ದು, ಕಳೆದ ಮೂರು ವಾರಗಳಲ್ಲಿ ದೇಶಾದ್ಯಂತ ಬ್ಲಾಕ್ ಫಂಗಸ್ ಗೆ ಬಲಿಯಾದವರ ಸಂಖ್ಯೆ 2100ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 
ದೇಶದಲ್ಲಿ ಬ್ಲಾಕ್ ಫಂಗಸ್ ಸೋಂಕಿನ ಸೋಂಕಿನ ಏರಿಕೆ ಪ್ರಮಾಣವೂ ಶೇ.150ಕ್ಕಿಂತ ಹೆಚ್ಚಾಗಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಒಂದೆಡೆ ಕೊರೊನಾ ಸೋಂಕು ವ್ಯಾಪಕ ಪ್ರಮಾಣದಲ್ಲಿ ಕಾಣಿಸಿಕೊಂಡು ಈಗ ಇಳಿಕೆಯಾಗುತ್ತಿರುವ ಬೆನ್ನಲ್ಲೇ ಕಪ್ಪು ಶಿಲೀಂದ್ರ ಪ್ರಕರಣಗಳು ಹೆಚ್ಚಾಗುತ್ತಿರುವುದು ಆರೋಗ್ಯ  ಇಲಾಖೆಯ ಕಳವಳಕ್ಕೆ ಕಾರಣವಾಗಿದೆ.
ದೇಶದ ವಿವಿಧ ಭಾಗಗಳಲ್ಲಿ ಈವರೆಗೆ 31,216 ಬ್ಲಾಕ್ ಫಂಗಸ್ ಪ್ರಕರಣಗಳು ಮತ್ತು 2,109 ಸಾವುಗಳು ವರದಿಯಾಗಿವೆ. ಬ್ಲಾಕ್​ ಫಂಗಸ್​ ಸೋಂಕು ಪ್ರಕರಣ ಮತ್ತು ಸಾವಿನ ಏರಿಕೆಗೆ ಆಂಫೊಟೆರಿಸಿನ್-ಬಿ ಔಷಧದ ತೀವ್ರ ಕೊರತೆಯೇ ಕಾರಣ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಹೆಚ್ಚು ಹಾನಿ‌ ಸಂಭವಿಸಿರುವ ರಾಜ್ಯಗಳ ಪಟ್ಟಿಯಲ್ಲಿಯೂ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು. ಈವರೆಗೆ 7,057 ಪ್ರಕರಣಗಳು ದಾಖಲಾಗಿದ್ದು, 609 ಸಾವುಗಳು ಸಂಭವಿಸಿವೆ. ಗುಜರಾತ್ 5,418 ಪ್ರಕರಣಗಳು ಮತ್ತು 323 ಸಾವುಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, 2,976  ಪ್ರಕರಣಗಳೊಂದಿಗೆ ರಾಜಸ್ಥಾನ ಮೂರನೇ ಸ್ಥಾನದಲ್ಲಿದೆ. ಮೇ 25 ರಂದು ಮಹಾರಾಷ್ಟ್ರದಲ್ಲಿ ಕೇವಲ 2,770 ಕಪ್ಪು ಶಿಲೀಂದ್ರ ಪ್ರಕರಣಗಳು ಮತ್ತು ಗುಜರಾತ್‌ನಲ್ಲಿ 2,859 ಪ್ರಕರಣಗಳು ವರದಿಯಾಗಿವೆ.
ಉತ್ತರ ಪ್ರದೇಶದಲ್ಲಿ 1,744 ಪ್ರಕರಣಗಳು ಮತ್ತು 142 ಸಾವುಗಳು ಮತ್ತು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1,200 ಪ್ರಕರಣಗಳು ಮತ್ತು 125 ಸಾವುಗಳು ವರದಿಯಾಗಿವೆ. ಮೇ 25 ರಂದು ಒಂದೇ ದಿನ ಉತ್ತರ ಪ್ರದೇಶದಲ್ಲಿ ಕೇವಲ 701 ಪ್ರಕರಣಗಳು ಮತ್ತು ನೆರೆಯ ದೆಹಲಿಯಲ್ಲಿ 119 ಪ್ರಕರಣಗಳು ದಾಖಲಾಗಿವೆ. 
 

 

Read These Next

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ಫೇಸ್ ಕ್ರೀಂನಲ್ಲಿ 24 ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಯತ್ನ: ಏರ್ ಪೋರ್ಟ್ ನಲ್ಲಿ ಆರೋಪಿ ಬಂಧನ

ಹೈದರಾಬಾದ್: ಹೈದರಾಬಾದ್ ಆರ್ ಜಿ ಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಫೇಸ್ ಕ್ರೀಮ್ ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ...