ವರ್ತಮಾನದಲ್ಲಿ ಇಂಗ್ಲೀಷ್ ಭಾಷಾ ಜ್ಞಾನಕ್ಕೆ ಬೇಡಿಕೆ ಇದೆ: ಸುನಿಲ್

Source: so news | By MV Bhatkal | Published on 11th June 2019, 7:46 PM | Coastal News | Don't Miss |

ಭಟ್ಕಳ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಭಾಷಾ ಜ್ಞಾನ ಅತ್ಯಗತ್ಯವಾಗಿದ್ದು, ಇದನ್ನು ಮನಗಂಡ ಸರಕಾರ ಆಂಗ್ಲಮಾಧ್ಯಮ ಶಾಲೆಗಳನ್ನು ತೆರೆಯಲು ಕ್ರಮ ಕೈಗೊಂಡಿದೆ ಎಂದು ಶಾಸಕ ಸುನಿಲ್ ಬಿ. ನಾಯ್ಕ ಹೇಳಿದರು.
ಅವರು ತಾಲೂಕಿನ ಕೈಕಿಣಿ ಗ್ರಾಮ ಪಂಚಾಯತ ವ್ಯಾಪ್ತಿಯ ತೆರ್ನಮಕ್ಕಿಯಲ್ಲಿ ಆರಂಭವಾದ ಆಂಗ್ಲ ಮಾಧ್ಯಮ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದರು. ಪಾಲಕರು ಹಾಗೂ ಶಿಕ್ಷಕರು ಮಕ್ಕಳಲ್ಲಿ ನೈತಿಕ ಶಿಕ್ಷಣದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿಸಬೇಕು. ಆಂಗ್ಲ ಭಾಷಾ ಕಲಿಕೆಯ ಬಗ್ಗೆ ಆಸಕ್ತಿಯನ್ನು ಹೊಂದಿದ್ದರೂ ಮಾತೃಭಾಷೆಯನ್ನು ಕಡೆಗಣಿಸಬಾರದು. ಕನ್ನಡದ ಬಗ್ಗೆ ಪ್ರೀತಿ, ಅಭಿಮಾನವನ್ನು ತೋರಬೇಕು ಎಂದರು. ಒಂದು ಶಾಲೆಯಲ್ಲಿ ಕೇವಲ 30 ಮಕ್ಕಳಿಗೆ ಮಾತ್ರ ಅವಕಾಶ ಇದ್ದು, ಚೀಟಿ ಎತ್ತುವುದರ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಇಲ್ಲಿನ ಬೇಡಿಕೆಯನ್ನು ಪರಿಗಣಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೃಷ್ಣ ನಾಯ್ಕ ಅಧ್ಯಕ್ಷತೆಯನ್ನು ವಹಿಸಿದ್ದರು. ಕೈಕಿಣಿ ಗ್ರಾಮ ಪಂಚಾಯತ ಉಪಾಧ್ಯಕ್ಷ ಸುಬ್ರಾಯ ನಾಯ್ಕ, ಸದಸ್ಯ ಉದಯ ಕೋಟದಮಕ್ಕಿ ಮಾತನಾಡಿದರು. ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಯಲ್ಲಮ್ಮ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತೆರ್ನಮಕ್ಕಿ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಪ್ರಶಾಂತ ಪಟಗಾರ ವಂದಿಸಿದರು. ಸಿಆರ್‍ಪಿ ಸೀಮಾ ಜೋಶಿ, ತೆರ್ನಮಕ್ಕಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ತ್ರಿವೇಣಿ ನಾಯಕ್ ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...