ಸೋಂಕು ನಿವಾರಕ ಸುರಂಗ ಉದ್ಘಾಟನೆ

Source: sonews | By Staff Correspondent | Published on 12th April 2020, 2:49 PM | State News | Don't Miss |

ಶ್ರೀನಿವಾಸಪುರ:  ಸೋಂಕು ನಿವಾರಕ ಸುರಂಗದ ಮೂಲಕ ಪ್ರವೇಶಿಸುವ ಮೂಲಕ ಕೊರೊನಾ ವೈರಾಣು ಹರಡುವುದನ್ನು ತಪ್ಪಿಸಬೇಕು ಎಂದು ಎಪಿಎಂಸಿ ಅಧ್ಯಕ್ಷ ಎನ್‌.ರಾಜೇಂದ್ರ ಪ್ರಸಾದ್ ಹೇಳಿದರು.

ಪಟ್ಟಣದ ಹೊರ ವಲಯದಲ್ಲಿನ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದ ಪ್ರವೇಶ ದ್ವಾರದಲ್ಲಿ ಅಳವಡಿಸಲಾಗಿರುವ ಸೋಂಕು ನಿವಾರಕ ಸುರಂಗ ಉದ್ಘಾಟಿಸಿ ಮಾತನಾಡಿ, ಮಾರುಕಟ್ಟೆಗಳಲ್ಲಿ ಹೆಚ್ಚಿನ ಸಂಖ್ಯೆಯ ಜನ ಸೇರುವುದರಿಂದ ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಅದನ್ನು ತಡೆಯುವ ಉದ್ದೇಶದಿಂದ ಸೋಂಕು ನಿವಾರಕ ಸುರಂಗವನ್ನು ಸ್ಥಾಪಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಮಾವಿನ ಸುಗ್ಗಿ ಕಾಲದಲ್ಲಿ ಸ್ಥಳೀಯ ಕೃಷಿ ಕಾರ್ಮಿಕರು ಮಾವಿನ ಕಟಾವು ಕಾರ್ಯದಲ್ಲಿ ತೊಡಗುವುದರಿಂದ, ಮಂಡಿಗಳಲ್ಲಿ ಕೆಲಸ ಮಾಡಲು ನೆರೆಯ ಆಂಧ್ರಪ್ರದೇಶ ಹಾಗೂ ತಮಿಳು ನಾಡಿನ ಕಾರ್ಮಿಕರ ಅಗತ್ಯ ಬೀಳಬಹುದು. ಅವರನ್ನು ಕೆಲಸಕ್ಕೆ ಕರೆದುಕೊಳ್ಳುವ ಮುನ್ನ ಆರೋಗ್ಯ ಪರೀಕ್ಷೆ ಮಾಡಿಸಲಾಗುವುದು. ಆರೋಗ್ಯ ಸಮಸ್ಯೆ ಇರುವವರನ್ನು ಹಿಂದಕ್ಕೆ ಕಳುಹಿಸಲಾಗುವುದು. ಮಾರುಕಟ್ಟೆ ಅಭಿವೃದ್ಧಿಗೆ ನಬಾರ್ಡ್‌ನಿಂದ ರೂ.5 ಕೋಟಿ ಅನುದಾನ ಬಂದಿದೆ. ಆ ಹಣದಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಮಾತನಾಡಿ, ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಲು ಪೂರಕವಾದ ಎಲ್ಲ ನೆರವು ನೀಡಲಾಗುವುದು. ಅಗತ್ಯವೆನಿಸಿದರೆ ಆರೋಗ್ಯ ಹಾಗೂ ಪೊಲೀಸ್ ಇಲಾಖೆ ನೆರವು ಪಡೆಯಲಾಗುವುದು ಎಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ, ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಶ್ರೀನಿವಾಸ್‌, ಪುರಸಭಾ ಸದಸ್ಯ ಫೈರೋಜ್‌ ಪಾಷ, ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ಪರಿಸರ ಎಂಜಿನಿಯರ್‌ ಡಿ.ಶೇಖರರೆಡ್ಡಿ, ಎಪಿಎಂಸಿ ಕಾರ್ಯದರ್ಶಿ ಎಂ.ವೇಣುಗೋಪಾಲ್‌, ಸಹ ಕಾರ್ಯದರ್ಶಿ ಪಿ.ಎನ್‌.ಜಗನ್ನಾಥ್‌, ವರ್ತಕರ ಸಂಘದ ಅಧ್ಯಕ್ಷ ಎಚ್‌.ರವೀಂದ್ರರೆಡ್ಡಿ, ಮಂಡಿ ಮಾಲೀಕ ದಿವಾಕರ್‌ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...