ಶ್ರೀರಂಗಪಟ್ಟಣ ದಸರಾ ಮಹೋತ್ಸವದಲ್ಲಿ ಘಟನೆ. ಪಟಾಕಿ ಸದ್ದಿಗೆ ಬೆದರಿದ ಅಂಬಾರಿ ಹೊತ್ತ ಆನೆ

Source: VB News | By Laxmi Tanaya | Published on 10th October 2021, 5:13 PM | State News |

ಶ್ರೀರಂಗಪಟ್ಟಣ : 'ಶ್ರೀರಂಗಪಟ್ಟಣ ದಸರಾ' ಉತ್ಸವದಲ್ಲಿ ಅಂಬಾರಿ ಹೊತ್ತ ಆನೆಯು ಪಟಾಕಿ ಹಾಗೂ ವಾದ್ಯಗಳ ಸದ್ದಿಗೆ ಬೆದರಿದ ಕಾರಣ ಜಂಬೂಸವಾರಿಯನ್ನು ಸ್ಥಗಿತಗೊಳಿಸಿದ ಘಟನೆ ನಡೆದಿದೆ. ಆನೆ ನಿಂತಲ್ಲೇ ಹಿಂದಕ್ಕೆ ಸುತ್ತು ಹಾಕಿದ ಪರಿಣಾಮ ಗಾಬರಿಗೊಂಡ ಜನರು ಚೆಲ್ಲಾಪಿಲ್ಲಿಯಾಗಿ ನೂಕುನುಗ್ಗಲು ಉಂಟಾಗಿದ್ದು, ಮಾವುತರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.

ಈ ಹಿನ್ನೆಲೆಯಲ್ಲಿ ಜಂಬೂಸವಾರಿಗೆ ಬದಲಾಗಿ ಬೆಳ್ಳಿರಥದಲ್ಲಿ ಚಾಮುಂಡೇಶ್ವರಿ ದೇವಿ ವಿಗ್ರಹವನ್ನು ಮೆರವಣಿಗೆ ನಡೆಸುವ ಮೂಲಕ ಶನಿವಾರ ಪಾರಂಪರಿಕ ಶ್ರೀರಂಗಪಟ್ಟಣ ದಸರಾವನ್ನು ಸಾಂಪ್ರದಾಯಿಕವಾಗಿ ಆಚರಿಸಲಾಯಿತು.

ಶ್ರೀರಂಗಪಟ್ಟಣ ಸಮೀಪದ ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆದಿಚುಂಚನಗಿರಿ ಮಠಾಧೀಶ ಡಾ. ನಿರ್ಮಲಾ ನಂದನಾಥ ಸ್ವಾಮೀಜಿ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಶನಿವಾರ ಮಧ್ಯಾಹ್ನ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ, ಸ್ಥಳೀಯ ಶಾಸಕ ರವೀಂದ್ರ ಶ್ರೀಕಂಠಯ್ಯ, ನಾಗಮಂಗಲ ಶಾಸಕ ಸುರೇಶ್‌ಗೌಡ, ಮಳವಳ್ಳಿ ಶಾಸಕ ಡಾ.ಅನ್ನದಾನಿ, ಜಿಲ್ಲಾಧಿಕಾರಿ ಎಸ್. ಅಶ್ವಥಿ, ಜಿಪಂ ಸಿಇಒ ದಿವ್ಯಾಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ, ಅಪರ ಜಿಲ್ಲಾಧಿಕಾರಿ ಶೈಲಜಾ, ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ, ತಹಶೀಲ್ದಾರ್ ಶ್ವೇತಾ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Read These Next

ಚುನಾವಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯರಿತು ಕಾರ್ಯನಿರ್ವಹಿಸಿ - ಡಾ|| ನಾಗೇಂದ್ರ ಎಫ್.ಹೊನ್ನಳ್ಳಿ

ಶಿವಮೊಗ್ಗ : ಡಿಸೆಂಬರ್ 10ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ನಡೆಯಲಿರುವ ಚುನಾವಣಾ ಕಾರ್ಯಕ್ಕೆ ...

ವಿಶ್ವ ವಿಕಲಚೇತನರ ದಿನಾಚರಣೆ ಕಾನೂನು ಸೇವಾ ಪ್ರಾಧಿಕಾರದಿಂದ ಸಹಕಾರ, ನ್ಯಾಯಾಧೀಶೆ ಪುಪ್ಷಲತಾ.

ಧಾರವಾಡ : ವಿಕಲಚೇತನರಿಗೆ ಅನುಕಂಪದ ಕಾರಣದಿಂದ ಅವಕಾಶ ವಂಚಿತರಾಗಬಾರದು, ಇಂತಹ ಮಕ್ಕಳಿಗೆ ಅಸಡ್ಯೆ ತೋರದೆ ಕಾಳಜಿ ಪೂರ್ವಕವಾಗಿ ...