ಮೇಕೆದಾಟು ಯೋಜನೆ ಜಾರಿಗೆ ಛಲದ ಹೋರಾಟ ಅಗತ್ಯ: ಖರ್ಗೆ

Source: S O News | By I.G. Bhatkali | Published on 10th January 2022, 8:31 AM | State News | Don't Miss |

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ವಿಫಲಗೊಳಿಸಲು ಬಿಜೆಪಿ, ಜೆಡಿಎಸ್ ಹಾಗೂ ಇತರ ಪಕ್ಷಗಳು ಪ್ರಯತ್ನಿಸುತ್ತಿವೆ. ಆದರೆ, ಇದಕ್ಕೆ ನಾವು ವಿಚಲಿತರಾಗುವ ಅಗತ್ಯ ಇಲ್ಲ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ರವಿವಾರ ಕನಕಪುರದ ಸಂಗಮದಲ್ಲಿ ಏರ್ಪಡಿಸಿದ್ದ ಐತಿಹಾಸಿಕ ಪಾದಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, 9 ಸಾವಿರ ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಆರಂಭಿಸಲು ಕಾಂಗ್ರೆಸ್ ಸರಕಾರ ಎಲ್ಲ ಪ್ರಯತ್ನ ನಡೆಸಿತ್ತು. 67 ಟಿಎಂಸಿ ನೀರು ಶೇಖರಣಾ ಸಾಮರ್ಥ್ಯದ ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಪ್ರಬಲ ಹೋರಾಟ ನಡೆಸುವ ಛಲ ಕಾಂಗ್ರೆಸ್ ಪಕ್ಷದ ನಾಯಕರಲ್ಲಿದೆ. 

ಇದನ್ನು ವಿಫಲಗೊಳಿಸಲು ಸರಕಾರವು ವಿಫಲಯತ್ನ ನಡೆಸಿದೆ ಎಂದು ಟೀಕಿಸಿದರು.

ಮೇಕೆದಾಟು ಯೋಜನೆಯಿಂದ ತಮಿಳುನಾಡು ಸೇರಿದಂತೆ ಯಾರಿಗೂ ತೊಂದರೆ ಆಗುವುದಿಲ್ಲ. ಯೋಜನೆಯಿಂದ ಬಾಧಿತವಾಗುವ ಅರಣ್ಯ ಪ್ರದೇಶದ ಎರಡು ಪಟ್ಟು ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲು ಸರಕಾರ ಗುರುತಿಸಿದೆ. ಯಾವ ಕಾರಣಕ್ಕೂ ಈ ಯೋಜನೆ ನಿಲ್ಲಬಾರದು ಎಂದು ಹೇಳಿದರು.

ನಮ್ಮ ಕಡೆ ಒಂದು ಮಾತಿದೆ. 'ಮೈನತ್ ಕರೇಗಾ ಮುರುಗಾ ಸಾಬ್, ಅಂಡೆ ಕಾಯೆಗಾ ಫಕೀರ್ ಸಾಬ್' ಎಂಬಂತೆ ಎಲ್ಲ ಡಿ.ಕೆ., ಡಿ.ಕೆ ಎಂದು ನಾವು ಈ ಭಾಗದ ಜನಪ್ರಿಯ ಸಂಸದರಾದ ಡಿ.ಕೆ. ಸುರೇಶ್ ಅವರನ್ನು ನಾವು ಮರೆತಿದ್ದೇವೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜನ ಖರ್ಗೆ ಈ ಭಾಗದ ಸಂಸದ ಡಿ.ಕೆ.ಶಿವಕುಮಾರ್ ಎಂದು ಹೇಳಿ, ಅದನ್ನು ಸರಿಪಡಿಸಲು ಶಾಹಿರಿ ಮೂಲಕ ಚಟಾಕಿ ಹಾರಿಸಿದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...