ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚಳ. ಕಾರವಾರ ಮತ್ತು ಹೊನ್ನಾವರ ನಗರದ ಶಾಲೆಗೆ ರಜೆ.
ಕಾರವಾರ: ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಮಹಾಮಾರಿ ಕರೋನಾ ಹೆಚ್ಚುತ್ತಿರುವ ಕಾರಣದಿಂದ ಜಿಲ್ಲಾಡಳಿತ ಅಲರ್ಟ್ ಆಗಿದೆ.
ಕಾರವಾರ ಮತ್ತು ಹೊನ್ನಾವರದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಜನವರಿ 21ರವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಇದೆ. ಈ ನಡುವೆ ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಕಾರವಾರ ಮತ್ತು ಹೊನ್ನಾವರ ನಗರ ಪ್ರದೇಶದ ಶಾಲೆಗಳನ್ನು ಒಂದು ವಾರದ ಅವಧಿಗೆ ತರಗತಿಗಳನ್ನು ಸ್ಥಗಿತ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಕಾರವಾರ ಮತ್ತು ಹೊನ್ನಾವರ ನಗರ ಪ್ರದೇಶದ ಪಿಯು ಕಾಲೇಜುಗಳಲ್ಲಿ ದ್ವಿತೀಯ ಪಿ ಯು ಕಾಲೇಜಿನ ವ್ಯಾಸಂಗಕ್ಕೆ ಆದ್ಯತೆ ನೀಡಿ. ಪ್ರಥಮ ಪಿಯು ತರಗತಿಗಳನ್ನು ಶೇಕಡ ೫೦ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್ ಶಿಷ್ಟಾಚಾರದನ್ವಯ ಪರ್ಯಾಯ ತರಗತಿಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳುವ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ತಿಳಿಸಿದ್ದಾರೆ.