ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಗರ್ಭಿಣಿಯರು, ಅಂಗವಿಕಲ ಉದ್ಯೋಗಿಗಳು ಮನೆಯಿಂದಲೇ ಕೆಲಸ ನಿರ್ವಹಿಸಬಹುದು; ಸಚಿವ ಜಿತೇಂದ್ರ ಸಿಂಗ್‌

Source: VB | By I.G. Bhatkali | Published on 10th January 2022, 9:06 AM | National News |

ಹೊಸದಿಲ್ಲಿ: ಕೋವಿಡ್ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರಿ ಇಲಾಖೆಗಳ ಗರ್ಭಿಣಿಯರು ಮತ್ತು ಅಂಗವಿಕಲ ಉದ್ಯೋಗಿಗಳಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಸಹಾಯಕ ಸಿಬ್ಬಂದಿ ಸಚಿವ ಜಿತೇಂದ್ರ ಸಿಂಗ್ ಅವರು ರವಿವಾರ ಇಲ್ಲಿ ತಿಳಿಸಿದರು. ಆದಾಗ್ಯೂ ಅವರು ಕರ್ತವ್ಯಕ್ಕೆ ಲಭ್ಯರಿರಬೇಕು ಮತ್ತು ಮನೆಯಿಂದಲೇ ಕೆಲಸ ಮಾಡಬೇಕಾಗುತ್ತದೆ ಎಂದರು.

ಕೋವಿಡ್ ಕಂಟೈನೈಂಟ್ ವಲಯದಲ್ಲಿ ವಾಸವಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಂಟೈನೈಂಟ್ ವಲಯವನ್ನು ಡಿ-ನೋಟಿಫೈ ಮಾಡುವವರೆಗೆ ಕಚೇರಿಗೆ ಬರುವುದರಿಂದ ವಿನಾಯಿತಿಯನ್ನು ನೀಡಲಾಗಿದೆ ಎಂದು ಸಿಂಗ್ ತಿಳಿಸಿದರು.

ಅಧೀನ ಕಾರ್ಯದರ್ಶಿಗಿಂತ ಕೆಳಗಿನ ಸರಕಾರಿ ನೌಕರರ ಭೌತಿಕ ಹಾಜರಾತಿಯನ್ನು ಶೇ.50ಕ್ಕೆ ನಿರ್ಬಂಧಿಸಲಾಗಿದೆ ಮತ್ತು ಉಳಿದ ಶೇ.50ರಷ್ಟು ನೌಕರರು ಮನೆಯಿಂದಲೇ ಕೆಲಸ ಮಾಡಲಿದ್ದಾರೆ. ಸಂಬಂಧಿಸಿದ ಎಲ್ಲ ಇಲಾಖೆಗಳು ನೂತನ ನಿಯಮಗಳಿಗೆ ಅನುಗುಣವಾಗಿ ರೋಸ್ಟರ್‌ ಗಳನ್ನು ಸಿದ್ಧಪಡಿಸಲಿವೆ ಎಂದರು. ಆದಾಗ್ಯೂ ಕಚೇರಿಗೆ ಹಾಜರಾಗದೆ ಮನೆಯಿಂದಲೇ ಕೆಲಸ ಮಾಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ಎಲ್ಲ ಸಮಯದಲ್ಲಿಯೂ ದೂರವಾಣಿ ಮತ್ತು ಇತರ ವಿದ್ಯುನ್ಮಾನ ಸಂವಹನ ವಿಧಾನಗಳಲ್ಲಿ ಲಭ್ಯರಿರುತ್ತಾರೆ ಎಂದು ಸಿಂಗ್ ತಿಳಿಸಿದರು.

ಕೊರೋನ ವೈರಸ್ ತ್ವರಿತವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಧಿಕೃತ ಸಭೆಗಳನ್ನು ಸಾಧ್ಯವಾದಷ್ಟು ವಿಡಿಯೋ ಕಾನ್ಸರೆನ್ಸಿಂಗ್ ಮೂಲಕವೇ ನಡೆಸುವಂತೆ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯವು ಆದೇಶವನ್ನು ಹೊರಡಿಸಿದೆ. ಅತ್ಯಂತ ಅಗತ್ಯವಲ್ಲದಿದ್ದರೆ ಸಂದರ್ಶಕರೊಂದಿಗೆ ವೈಯಕ್ತಿಕ ಭೇಟಿಯನ್ನು ತಪ್ಪಿಸಬೇಕು ಎಂದು ಅವರು ಹೇಳಿದರು.

ನೂತನ ಮಾರ್ಗಸೂಚಿಗಳು ಜ.31ರವರೆಗೆ ಜಾರಿಯಲ್ಲಿರುತ್ತವೆ. ಆಗಾಗ್ಗೆ ನಿಯಮಿತವಾಗಿ ಪುನರ್‌ಪರಿಶೀಲನೆಯನ್ನು ನಡೆಸಲಾಗುತ್ತದೆ ಮತ್ತು ಪರಿಸ್ಥಿತಿಯನ್ನು ಅವಲಂಬಿಸಿ ಮಾರ್ಗಸೂಚಿಗಳನ್ನು ಪರಿಷ್ಕರಿಸಲಾಗುವುದು ಎಂದೂ ಸಿಂಗ್ ತಿಳಿಸಿದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...