ಭಟ್ಕಳದಲ್ಲಿ ಹೆಚ್ಚಾಗುತ್ತಿರುವ ಕಳ್ಳತನ ಪ್ರಕರಣ. ಸಾರ್ವಜನಿಕ ಪ್ರಕಟಣೆ ಹೊರಡಿಸಿದ ಪೊಲೀಸ್ ಇಲಾಖೆ‌.

Source: SO News | By Laxmi Tanaya | Published on 27th October 2020, 8:26 AM | Coastal News |

ಭಟ್ಕಳ : ಭಟ್ಕಳ ತಾಲೂಕಿನಲ್ಲಿ ಕಳ್ಳತನ ಆಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಪ್ರಕಟಣೆ ನೀಡಲಾಗಿದೆ.

ಹಗಲು ಮತ್ತು ರಾತ್ರಿ ಮನೆ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಯಾರೇ ಸಾರ್ವಜನಿಕರು ಮನೆಗೆ ಬೀಗ ಹಾಕಿ ಹೊರಗಡೆ ಅಥವಾ ಬೇರೆ ಊರಿಗೆ ಹೋಗುವ ಸಂದರ್ಭದಲ್ಲಿ ಮನೆಯ ಲೊಕೇಶನ್‌ ಹಾಗೂ ಬೀಗ ಹಾಕಿದ ಮನೆಯ ವಿವರಗಳನ್ನು  ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದ್ದಾರೆ. ತಮ್ಮ ವಿವರಗಳನ್ನು ಈ ಕೆಳಕಂಡ ಮೊಬೈಲ್ ನಂಬರಗೆ ವಾಟ್ಸಪ್ ಮಾಡಬೇಕಾಗಿ ಸಾರ್ವಜನಿಕರಲ್ಲಿ ಕೋರಲಾಗಿದೆ. 

ಇದರಿಂದ ನಿಮ್ಮ ಮನೆಯ ಸುರಕ್ಷತೆಯ ಕುರಿತು ಹಗಲು ಮತ್ತು ರಾತ್ರಿ ಬೀಟ್ ಸಿಬ್ಬಂದಿಯವರು ನಿಮ್ಮ ಮನೆಯ ಮೇಲೆ ನಿಗಾ ವಹಿಸಲು ಅನುಕೂಲವಾಗುವುದು‌ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಭಟ್ಕಳ ಪೊಲೀಸ್ ವೃತ್ತ ನಿರೀಕ್ಷಕರು, ಮೊಬೈಲ್ ನಂಬರ್ - 9480805232,  ಪಿ.ಎಸ್.ಐ ಭಟ್ಕಳ ಶಹರ ಪೊಲೀಸ್ ಠಾಣೆ -9480805269,  ಪಿ.ಎಸ್.ಐ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ - 9480805252,  ಪಿ.ಎಸ್.ಐ ಮುರ್ಡೇಶ್ವರ ಪೊಲೀಸ್ ಠಾಣೆ - 9480805253. ಈ ಸಂಖ್ಯೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...