ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ. ಸಡಗರ, ಸಂಭ್ರಮ, ವಿಜೃಂಭಣೆಯಿಂದ 76ನೇ ಸ್ವಾತಂತ್ರೋತ್ಸವ ಆಚರಣೆ

Source: SO News | By Laxmi Tanaya | Published on 15th August 2022, 11:17 PM | Coastal News | Don't Miss |

ಮಂಗಳೂರು : ನಗರದ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು.
 ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.
*ಅವರು ನೀಡಿದ ಸಂದೇಶದ ಸಾರ ಇಂತಿದೆ*:
 ರಾಷ್ಟ್ರ ಪ್ರೇಮ ಮತ್ತು ದೇಶ ಪ್ರೇಮವನ್ನು ಪ್ರತಿಯೊಬ್ಬ ಭಾರತೀಯರಲ್ಲಿ ಬಿತ್ತಲು ಮತ್ತು ಬೆಳೆಸಲು ಇದೇ ಅಗಸ್ಟ್-13 ರಿಂದ ಪ್ರತಿಯೊಂದು ಮನೆಯ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಲು “ಹರ್ ಘರ್ ತಿರಾಂಗ” ಅಭಿಯಾನವನ್ನು ಹಮ್ಮಿಕೊಳ್ಳಲಾತ್ತು, ಈ ಅಭಿಯಾನವನ್ನು ಯಶಸ್ವಿಗೊಳಿಸಲು ಧ್ವಜಸಂಹಿತೆಗೆ ತಿದ್ದುಪಡಿ ತರುವ ಮೂಲಕ ಪ್ರತಿಯೊಬ್ಬ ನಾಗರೀಕ ತಮ್ಮ ಮನೆಯ ಕಟ್ಟಡದ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ, ಅದರಂತೆ ಎಲ್ಲಾ ಮನೆಗಳ, ಸರ್ಕಾರಿ ಕಚೇರಿ ಕಟ್ಟಡಗಳ, ಸರ್ಕಾರೇತರ ಸಂಘಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 5 ಲಕ್ಷಕ್ಕೂ ಹೆಚ್ಚು ರಾಷ್ಟ್ರ ಧ್ವಜಗಳನ್ನು ಮನೆಗಳು, ಅಂಗಡಿಗಳು, ಸರ್ಕಾರಿ ಕಟ್ಟಡಗಳು ಇನ್ನಿತರ ಎಲ್ಲಾ ಕಟ್ಟಡಗಳ ಮೇಲೆ ಹಾರಿಸಲಾಗಿದೆ.

*ನಮ್ಮ ಕನಸಿನ ಮಂಗಳೂರು*
 ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 750 ಮೆಗಾ ವ್ಯಾಟ್ ವಿದ್ಯುತ್ತಿನ ಬೇಡಿಕೆ ಕಂಡು ಬರುತ್ತಿದ್ದು, ಮುಂದಿನ 5 ರಿಂದ 8 ವರ್ಷಗಳಲ್ಲಿ 250ಕ್ಕಿಂತ ಹೆಚ್ಚು ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಬರಲಿರುತ್ತದೆ. ಈ ಹಿನ್ನೆಲೆಯಲ್ಲಿ ಅಡಚಣೆ ರಹಿತ ವಿದ್ಯುತ್ತನ್ನು ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ 300 ಕೋಟಿ ರೂ.ಗಳ ವೆಚ್ಚದಲ್ಲಿ 400 ಕಿಲೋ ವ್ಯಾಟ್ (ಕೆವಿ) ವಿದ್ಯುತ್ ಉಪಕೇಂದ್ರವನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
 ವಿದ್ಯುತ್ ಚಾಲಿತ ವಾಹನಗಳ ಸ್ಟೇಷನ್‍ಗಳಿಗೆ ಮಂಗಳೂರಿನಲ್ಲಿ ಬೇಡಿಕೆಯಿದ್ದು ಇದರಂತೆ 17 ವಿದ್ಯುತ್ ಚಾಲಿತ ವಾಹನಗಳ ಚಾಜಿರ್ಂಗ್ ಸ್ಟೇಷನ್‍ಗಳನ್ನು ಸ್ಥಾಪಿಸಲಾಗಿರುತ್ತದೆ ಹಾಗೂ ಮುಂದಿನ ದಿನಗಳಲ್ಲಿ 79 ವಿದ್ಯುತ್ ಚಾಲಿತ ವಾಹನಗಳ ಚಾಜಿರ್ಂಗ್ ಸ್ಟೇಷನ್‍ಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ.
 ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಎಂಆರ್‍ಎಫ್ ಘಟಕವನ್ನು 2.50 ಕೋಟಿ ರೂ.ಗಳ ವೆಚ್ಚದಲ್ಲಿ ತಂಕ ಎಡಪದವಿನಲ್ಲಿ ಸ್ಥಾಪಿಸಲಾಗುತ್ತಿದೆ ಹಾಗೂ ಪ್ರಸಕ್ತ ವರ್ಷದಲ್ಲಿ ಬೆಳ್ತಂಗಡಿಯ ಉಜಿರೆ, ಪುತ್ತೂರಿನ ಕೆದಂಬಾಡಿ, ಬಂಟ್ವಾಳದ ನರಿಕೊಂಬುವಿನಲ್ಲಿ 3 ಹೆಚ್ಚುವರಿ ಎಂಆರ್‍ಎಫ್ ಘಟಕಗಳನ್ನು ನಿರ್ಮಿಸಲು ಅಂದಾಜು 913 ಲಕ್ಷ ರೂ.ಗಳ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ.
 ಶೌಚಾಲಯಗಳಲ್ಲಿ ಉತ್ಪತ್ತಿಯಾಗುವ ಕಪ್ಪುನೀರನ್ನು ವೈಜ್ಞಾನಿಕವಾಗಿ ನಿರ್ವಹಿಸುವ ಸಲುವಾಗಿ ಬಂಟ್ವಾಳ ಗೋಳ್ತಮಜಲು, ಬೆಳ್ತಂಗಡಿ ಉಜಿರೆಯಲ್ಲಿ 1.57 ಕೋಟಿ ರೂ.ಗಳ ವೆಚ್ಚದಲ್ಲಿ ಮಲತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗುತ್ತಿದೆ.
 ಅಮೃತ ಸರೋವರ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ 75 ಕೆರೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಅದರಲ್ಲಿ 15 ಕೆರೆಗಳ ಅಭಿವೃದ್ಧಿಯನ್ನು ಪೂರ್ಣಗೊಳಿಸಲಾಗಿರುತ್ತದೆ. ಅದೇ ರೀತಿ ಅಮೃತ ಉದ್ಯಾನವನ ಕಾರ್ಯಕ್ರಮವನ್ನು ಸಹ ಯಶಸ್ವಿಯಾಗಿ ಅನುμÁ್ಠನಗೊಳಿಸಲಾಗಿರುತ್ತದೆ.
 ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ವಿಷನ್ ಅನ್ನು ಒಟ್ಟು 3 ಹಂತಗಳಲ್ಲಿ 700 ಕಾಮಗಾರಿಗಳನ್ನು 518 ಕೋಟಿ ರೂ.ಗಳ ವೆಚ್ಚದಲ್ಲಿ ಅನುμÁ್ಠನಗೊಳಿಸಲಾಗುತ್ತಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಒಟ್ಟು ಹೊಸ 7 ಯೋಜನೆಗಳನ್ನು 487.83 ಕೋಟಿ ರೂ.ಗಳ ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, ಅದರಲ್ಲಿ 2 ಯೋಜನೆಗಳು ಅನುμÁ್ಠನ ಹಂತದಲ್ಲಿವೆ.
ಜಿಲ್ಲೆಗೊಂದು ಗೋಶಾಲೆ ಸ್ಥಾಪನೆ ಯೋಜನೆಯಡಿ ಸರ್ಕಾರದಿಂದ 47 ಲಕ್ಷ ರೂ.ಗಳ ಅನುದಾನ ಬಿಡುಗಡೆಗೊಂಡಿದ್ದು, ಕಡಬ ತಾಲೂಕಿನ ರಾಮಕುಂಜದಲ್ಲಿ ಸೂಕ್ತ ಜಾಗವನ್ನು ಸಹ ಗುರುತಿಸಲಾಗಿರುತ್ತದೆ.
 ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಆಯವ್ಯಯದಲ್ಲಿ ಘೋಷಿಸಲಾದಂತೆ ಜಿಲ್ಲೆಯ 3 ಕಡೆ ಶಿಶುಪಾಲನ ಕೇಂದ್ರಗಳನ್ನು ಸ್ಥಾಪಿಸಲಾಗಿರುತ್ತದೆ. ಉದ್ಯೋಗಸ್ಥ ಮಹಿಳೆಯರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ 2 ಕಡೆ ಉದ್ಯೋಗಸ್ಥ ಮಹಿಳೆಯರ ವಸತಿ ಗೃಹವನ್ನು ಪ್ರಾರಂಭಿಸಲಾಗಿರುತ್ತದೆ.
 ಹಿಂದುಳದ ವರ್ಗಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಕ್ಕೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಬಂಟ್ವಾಳ ತಾಲೂಕು ಪುಂಜಾಲಕಟ್ಟೆಯಲ್ಲಿ 25 ಕೋಟಿ ರೂ.ಗಳ ವೆಚ್ಚದಲ್ಲಿ ನಾರಾಯಣಗುರು ವಸತಿ ಶಾಲೆಯನ್ನು ಸ್ಥಾಪಿಸಲಾಗುತ್ತಿದೆ.
 ಸೇನೆ ಮತ್ತು ಪೆÇಲೀಸ್ ಸೇವೆಗೆ ಸೇರುವ ಯುವಕ, ಯುವತಿಯರಿಗೆ ಸೂಕ್ತ ತರಬೇತಿ ನೀಡಲು ವೀರರಾಣಿ ಅಬ್ಬಕ್ಕ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯನ್ನು ಮಂಗಳೂರಿನಲ್ಲಿ ಪ್ರಾರಂಭಿಸಲಾಗುತ್ತಿದೆ. 6 ತಿಂಗಳ ಕಾಲ ಸೇನಾ ಆಯ್ಕೆ ಪೂರ್ವ ತರಬೇತಿ ನೀಡಲು ಚಿಂತಿಸಲಾಗಿದೆ.
 ರಾಜ್ಯ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ 8000 ಹೊಸ ಮನೆಗಳ ಗುರಿಯನ್ನು ಮಂಜೂರು ಮಾಡಿದ್ದು ಈಗಾಗಲೇ ಫಲಾನುಭವಿಗಳ ಆಯ್ಕೆ ಪೂರ್ಣಗೊಂಡಿರುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 3621 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿರುತ್ತದೆ.
 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪರಿಶಿಷ್ಟ ಪಂಗಡ, ಹಿಂದುಳಿದ ಅಲ್ಪ ಸಂಖ್ಯಾತ ವರ್ಗದ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಅನುಕೂಲವಾಗುವಂತೆ ದೀನ್ ದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿ ನಿಲಯ ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ.

*ಆಕರ್ಷಣೀಯ ಮಂಗಳೂರು*
 ಯಕ್ಷಗಾನವನ್ನು ಪೆÇ್ರೀತ್ಸಾಹಿಸಲು ಈ ವರ್ಷ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ಚಿಂತಿಸಲಾಗಿದೆ, ಅದಕ್ಕಾಗಿ 2 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ಇದರಂತೆ ಯಕ್ಷಗಾನ ಸಮ್ಮೇಳನವನ್ನು ಆಯೋಜಿಸಲಾಗುವುದು.
ಪ್ರವಾಸಿಸ್ನೇಹಿ ಜಿಲ್ಲೆಯನ್ನಾಗಿಸಲು ಅನೇಕ ರೀತಿಯಲ್ಲಿ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಪ್ರಮುಖ ಬೀಚ್‍ಗಳನ್ನು ಅಭಿವೃದ್ಧಿಗೊಳಿಸಿ ಪ್ರವಾಸಿಗರನ್ನು ಸೆಳೆಯುವಂತೆ ಮಾಡಲು ಕ್ರಮವಹಿಸಲಾಗುತ್ತಿದೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳನ್ನು ಸಹ ಪ್ರವಾಸೋದ್ಯಮ ಇಲಾಖೆ ವತಿಯಿಂದ ಮತ್ತು ಹಿಂದೂ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಅಭಿವೃದ್ಧಿಗೊಳಿಸಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳಗಾಗಿ 23.6 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.

ಸ್ಥಳೀಯ ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಲಾ ರಾವ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಇದೇ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ ವಿಠ್ಠಲ ಕಿಣಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅತ್ಯುತ್ತಮ ಸೇವೆ ಸಲ್ಲಿಸಿದ ವೆನ್‍ಲಾಕ್ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆಯ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...