ಹೊಸ ಶಿಕ್ಷಣ ನೀತಿಯಿಂದ ಜಾಗತಿಕ ಶೈಕ್ಷಣಿಕ ಕೇಂದ್ರವಾಗಿ ಭಾರತ: ಪ್ರಧಾನಿ ಮೋದಿ

Source: uni | Published on 2nd August 2020, 12:38 AM | National News | Don't Miss |

 

ನವದೆಹಲಿ: ಹೊಸ ಶಿಕ್ಷಣ ನೀತಿಯನ್ನು ಜನರ ಆಶೋತ್ತರಗಳ ಅಭಿವ್ಯಕ್ತಿ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ನೀತಿಯು ಜನರ ಮನಸ್ಥಿತಿಯನ್ನು ಬದಲಿಸಲು ಸಹಾಯ ಮಾಡುವುದಲ್ಲದೆ, ಯುವ ಪೀಳಿಗೆಯನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ದೇಶವನ್ನು ಜಾಗತಿಕ ಶೈಕ್ಷಣಿಕ ಕೇಂದ್ರವನ್ನಾಗಿ ಬದಲಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.
ಶನಿವಾರ ವಿಡಿಯೋ-ಕಾನ್ಫರೆನ್ಸಿಂಗ್ ಮೂಲಕ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 ರ ಗ್ರ್ಯಾಂಡ್ ಫಿನಾಲೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಈ ಶಿಕ್ಷಣ ನೀತಿಯು ಉದ್ಯೋಗಾಕಾಂಕ್ಷಿಗಳಿಗಿಂತ ಮುಖ್ಯವಾಗಿ ಉದ್ಯೋಗ ಸೃಷ್ಟಿಕರ್ತರನ್ನು ರೂಪಿಸುವುದಕ್ಕೆ ಒತ್ತು ನೀಡುತ್ತದೆ. ಒಂದು ರೀತಿಯಲ್ಲಿ ಇದು  ನಮ್ಮ ಮನಸ್ಥಿತಿಯಲ್ಲಿ, ನಮ್ಮ ವಿಧಾನದಲ್ಲಿ ಸುಧಾರಣೆಯನ್ನು ತರುವ ಪ್ರಯತ್ನವಾಗಿದೆ ಎಂದು ಹೇಳಿದರು.
21 ನೇ ಶತಮಾನದ ಯುವಕರ ಚಿಂತನೆ, ಅಗತ್ಯಗಳು, ಭರವಸೆಗಳು ಮತ್ತು ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಈ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ. 21 ನೇ ಶತಮಾನವು ಜ್ಞಾನದ ಯುಗವಾಗಿದೆ.
ಆದ್ದರಿಂದ, ಇದು ಕೇವಲ ನೀತಿ ದಾಖಲೆ ಮಾತ್ರವಲ್ಲದೆ, 130 ಕೋಟಿಗೂ ಹೆಚ್ಚು ಭಾರತೀಯರ ಆಕಾಂಕ್ಷೆಗಳ ಪ್ರತೀಕವಾಗಿದೆ. ಕಲಿಕೆ, ಸಂಶೋಧನೆ ಮತ್ತು ನಾವೀನ್ಯತೆಗಳತ್ತ ಗಮನವನ್ನು ಕೇಂದ್ರೀಕರಿಸುವ ಸಮಯ ಇದಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. 
ನಾಲ್ಕನೇ ಹ್ಯಾಕಥಾನ್ ನಲ್ಲಿ 10,000 ವಿದ್ಯಾರ್ಥಿಗಳು ಫೈನಲ್ ನಲ್ಲಿ ಭಾಗವಹಿಸುತ್ತಿದ್ದಾರೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...