ಭಾರತೀಯ ಸೇನೆಯ  ನೇಮಕಾತಿ ಪ್ರಾಧಿಕಾರ(ಬೆಂಗಳೂರು) ಅರ್ಜಿ ಆಹ್ವಾನ

Source: sonews | By Staff Correspondent | Published on 23rd September 2020, 7:30 PM | State News |

ಬೆಂಗಳೂರು: ಭಾರತೀಯ ಸೇನೆಯ  ನೇಮಕಾತಿ ಪ್ರಾಧಿಕಾರ ಬೆಂಗಳೂರು ವತಿಯಿಂದ 2020-21 ನೇ ಸಾಲಿಗೆ ಅರ್ಹ ಪುರುಷ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಆನ್‍ಲೈನ್‍ನಲ್ಲಿ www.joinindianarmy.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ನೇಮಕಾತಿ ರ್ಯಾಲಿಗಳನ್ನು 19-09-2020 ರಿಂದ 31-03-2021 ರವರೆಗೆ ನಡೆಸಲಾಗುವುದು.  ಸರಿಯಾದ ದಿನಾಂಕ ಸ್ಥಳವನ್ನು ಕೋವಿಡ್ -19 ರ ಪರಿಸ್ಥಿತಿಯನ್ನು ನೋಡಿಕೊಂಡು ಪ್ರಕಟಿಸಲಾಗುವುದು.  

ಬೆಂಗಳೂರು ನಗರ/ ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಚಿತ್ರದುರ್ಗ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ  080-25596517, 080-29516517  ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.  

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...