ಭಾರತೀಯ ಮಾಧ್ಯಮ ಜಾಗತಿಕ ಮಟ್ಟಕ್ಕೇರಬೇಕು: ಪ್ರಧಾನಿ ಮೋದಿ

Source: uni | Published on 8th September 2020, 11:38 PM | National News | Don't Miss |


ನವದೆಹಲಿ: ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಜೈಪುರದ ಪ್ರವಾಸಿ ಆಕರ್ಷಣೆಯಾದ ಪತ್ರಿಕಾ ಗೇಟ್ ಅನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದ ಪ್ರಧಾನಿ, 'ಇಂದು ದೇಶದ ಸ್ಥಳೀಯ ಉತ್ಪನ್ನಗಳು ಜಾಗತಿಕ ಮಟ್ಟದಲ್ಲಿ ಸಾಗುತ್ತಿವೆ, ಭಾರತದ ಧ್ವನಿ ಕೂಡ ಜಾಗತಿಕವಾಗಿ ಹೆಚ್ಚುತ್ತಿದೆ. ಇಂದು ದೇಶವು ವಿಶ್ವ ಮಟ್ಟದಲ್ಲಿ ಬಲವಾದ ಉಪಸ್ಥಿತಿಯನ್ನು  ಹೊಂದಿದೆ ಎಂದು ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾದ ಅಗತ್ಯವನ್ನು ಒತ್ತಿ ಹೇಳಿದ್ದಾರೆ.
'ಇಂದು, ಭಾರತವು ಪ್ರತಿಯೊಂದು ಜಾಗತಿಕ ಹಂತದಲ್ಲೂ ಬಲವಾದ ಅಸ್ತಿತ್ವವನ್ನು ಹೊಂದಿದೆ. ಅಂತಹ ಸಮಯದಲ್ಲಿ, ಭಾರತೀಯ ಮಾಧ್ಯಮಗಳು ಜಾಗತಿಕ ಮಟ್ಟಕ್ಕೆ ಹೋಗಬೇಕಾಗಿದೆ. ನಮ್ಮ ಪತ್ರಿಕೆಗಳು ಮತ್ತು ನಿಯತಕಾಲಿಕೆಗಳು ಜಾಗತಿಕ ಖ್ಯಾತಿಯನ್ನು ಹೊಂದಿರಬೇಕು. ಈ ಡಿಜಿಟಲ್ ಯುಗದಲ್ಲಿ, ನಾವು  ಪ್ರಪಂಚದಾದ್ಯಂತ ಡಿಜಿಟಲ್ ತಲುಪಬೇಕು. ಅಲ್ಲದೆ ಭಾರತೀಯ ಸಂಸ್ಥೆಗಳು ವಿಶ್ವದ ವಿವಿಧ ಭಾಗಗಳಲ್ಲಿ ನೀಡುತ್ತಿರುವ ರೀತಿಯಲ್ಲಿ ಸಾಹಿತ್ಯ ಪ್ರಶಸ್ತಿಗಳನ್ನು ಸಹ ನೀಡಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಧಾನಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪತ್ರಿಕಾ ಸಮೂಹದ ಅಧ್ಯಕ್ಷ ಗುಲಾಬ್ ಕೊಠಾರಿ ಬರೆದಿರುವ 'ಸಂವಾದ್ ಉಪನಿಷತ್' ಮತ್ತು 'ಅಕ್ಷರ ಯಾತ್ರೆ' ಎಂಬ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿದರು.
ಹೊಸ ತಲೆಮಾರಿನವರಲ್ಲಿ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ಕರೆಯಿತ್ತ ಮೋದಿ, "ಇಂದು, ಪಠ್ಯ ಮತ್ತು ಟ್ವೀಟ್ ನ ಈ ಯುಗದಲ್ಲಿ, ನಮ್ಮ ಹೊಸ ಪೀಳಿಗೆಯವರು ಗಂಭೀರವಾದ ಜ್ಞಾನವನ್ನು ಅಳವಡಿಸಿಕೊಳ್ಳುವುದರಿಂದ ದೂರ ಸರಿಯದಿರುವುದು ಮುಖ್ಯ" ಎಂದು ಪ್ರಧಾನಿ ಹೇಳಿದರು.
ಸರ್ಕಾರದ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮಾಧ್ಯಮಗಳ ಕೊಡುಗೆಯನ್ನು ಶ್ಲಾಘಿಸಿದ ಪ್ರಧಾನಿ, ಕೊರೋನಾ ವಿರುದ್ಧದ ಜಾಗೃತಿ ಅಭಿಯಾನದಲ್ಲಿ ಭಾರತೀಯ ಮಾಧ್ಯಮಗಳು ಮಹತ್ವದ ಪಾತ್ರ ವಹಿಸಿವೆ. ನಮ್ಮ ಮಾಧ್ಯಮಗಳು ಸರ್ಕಾರದ ಕ್ರಮಗಳನ್ನು ವಿವರಿಸುವ  ಮತ್ತು ಸರ್ಕಾರದ ಯೋಜನೆಗಳಲ್ಲಿನ ನ್ಯೂನತೆಗಳನ್ನು ಟೀಕಿಸುವ ಉತ್ತಮ ಕೆಲಸವನ್ನು ಮಾಡುತ್ತಿವೆ” ಎಂದರು.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...