ಉಕ್ರೇನ್‌ನಲ್ಲಿ 16 ಸಾವಿರ ಭಾರತೀಯರು ಆತಂಕದಲ್ಲಿ: ತೆರವಿಗೆ ಕ್ರಮ: ಕೇಂದ್ರ ಸರಕಾರ ಭರವಸೆ

Source: Vb | By I.G. Bhatkali | Published on 26th February 2022, 9:31 AM | National News | Global News |

ಹೊಸದಿಲ್ಲಿ: ರಷ್ಯಾ ಸೇನೆಯಿಂದ ಆಕ್ರಮಣಕ್ಕೆ ಒಳಗಾಗಿರುವ ಉಕ್ರೇನ್‌ನಲ್ಲಿ ಸುಮಾರು 16 ಸಾವಿರ ಭಾರತೀಯರು ಸಿಲುಕಿಕೊಂಡಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ಎಲ್ಲ ನಾಗರಿಕರನ್ನು ಸುರಕ್ಷಿತವಾಗಿ ಮರಳಿ ಕರೆ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳುವುದಾಗಿ ಭಾರತ ಭರವಸೆ ನೀಡಿದೆ.

ಉಕ್ರೇನ್‌ನಲ್ಲಿ ಈಗಲೂ ಸಿಲುಕಿರುವ ನಾಗರಿಕರನ್ನು ತೆರವುಗೊಳಿಸಲು ಹಂಗೇರಿ ಹಾಗೂ ಪೋಲ್ಯಾಂಡ್‌ನಿಂದ ಉಕ್ರೇನ್ ಗಡಿಗೆ ಸರಕಾರದ ತಂಡವನ್ನು ಕಳುಹಿಸಲಾ ಗಿದೆ. ರಶ್ಯ ಸೇನೆ ದಾಳಿಯ ನಡುವೆ ಉಕ್ರೇನ್‌ನವಾಯುಮಾರ್ಗ ಮುಚ್ಚಿರುವು ದರಿಂದ ಅಧಿಕಾರಿಗಳು ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದಾರೆ.

“ಸುರಕ್ಷಿತ ದಾರಿಯನ್ನು ಗುರುತಿಸಲಾಗಿದೆ. ರಸ್ತೆಯ ಮೂಲಕ ನೀವು ಕೀವ್‌ನಿಂದ ತೆರಳಿದರೆ 9 ಗಂಟೆಗಳಲ್ಲಿ ಪೋಲ್ಯಾಂಡ್ ಹಾಗೂ 12 ಗಂಟೆಗಳಲ್ಲಿ ರೊಮಾನಿಯಾ ತಲುಪುತ್ತೀರಿ. ಮಾರ್ಗ ನಕ್ಷೆ ರೂಪಿಸಲಾಗಿದೆ'' ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷ ವರ್ಧನ್ ಶೃಂಗ್ಲಾ ಅವರು ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ನೆರವು ಹಾಗೂ ಮಾಹಿತಿ ನೀಡಲು 24x7 ಗಂಟೆಗಳ ನಿಯಂತ್ರಣ ಕೊಠಡಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಆರಂಭಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಷ್ಯಾದ ಅಧ್ಯಕ್ಷ ಪ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಉಕ್ರೇನ್‌ನಲ್ಲಿರುವ ಭಾರತೀಯ ನಾಗರಿಕರು, ಮುಖ್ಯವಾಗಿ ವಿದ್ಯಾರ್ಥಿಗಳ ಬಗ್ಗೆ ತಮ್ಮ ಕಳವಳದ ಬಗ್ಗೆ ಗಮನ ಸೆಳೆದಿದ್ದಾರೆ. ಟೆಲಿಫೋನ್ ಸಂಭಾಷಣೆಯಲ್ಲಿ ಪ್ರಧಾನಿ ಅವರು ಉಕ್ರೇನ್ ನಲ್ಲಿರುವ ಭಾರತೀಯರ ಸುರಕ್ಷಿತ ನಿರ್ಗಮನಕ್ಕೆ ಅತ್ಯಧಿಕ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಉಕ್ರೇನ್, ಹಂಗೇರಿ, ಪೋಲ್ಯಾಂಡ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಭಾರತೀಯ ನಾಗರಿಕರಿಗೆ ಹಲವು ಸಲಹೆಗಳನ್ನು ನೀಡಿದೆ. ಅಗತ್ಯದ ಸಂದರ್ಭ ಬಾಂಬ್ ದಾಳಿಯಿಂದ ತಪ್ಪಿಸಿಕೊಳ್ಳಲು ಆಶ್ರಯ ಪತ್ತೆ ಮಾಡುವುದು ಹೇಗೆ ಎಂಬ ಬಗೆಗಿನ ವಿವರಗಳನ್ನು ಕೂಡ ಈ ಸಲಹೆ ಒಳಗೊಂಡಿದೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...