ಇಂದಿರಾ ಕ್ಯಾಂಟಿನ್ ಅನ್ನ-ಸಾಂಬಾರ್ ರುಚಿ ಸವಿದ ಸಚಿವ ಯು.ಟಿ. ಖಾದರ್

Source: S.O. News Service | By MV Bhatkal | Published on 3rd July 2019, 3:28 PM | State News | Don't Miss |

ಕಲಬುರಗಿ:ಕಲಬುರಗಿ ನಗರ ಪ್ರದಕ್ಷಿಣೆ ನಡೆಸಿದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರು ಮಂಗಳವಾರ ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಮಗಾರಿ ಹಾಗೂ ಯೋಜನೆಗಳನ್ನು ಪರಿಶೀಲಿಸಿದರು.
ಜಯದೇವ ಹೃದ್ರೋಗ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್‍ನ ಮಾಸ್ಟರ್ ಕಿಚನ್‍ಗೆ ಭೇಟಿ ನೀಡಿದ ಅವರು ಮಹಾನಗರದ 7 ಇಂದಿರಾ ಕ್ಯಾಂಟಿನ್‍ಗಳಿಗೆ ಪೂರೈಕೆಯಾಗುವ ಅಹಾರ ಪದಾರ್ಥಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರು ಸ್ವತ: ಅನ್ನ-ಸಾಂಬಾರ್‍ನ ರುಚಿ ಸವಿದು ಆಹಾರಗಳ ಗುಣಮಟ್ಟ ಪರೀಕ್ಷಿಸಿದರು.
ಆಹಾರ ಸಾಮಾಗ್ರಿ ಸಂಗ್ರಹಿರುವ ಕೋಣೆ ವೀಕ್ಷಿಸಿದ ಅವರು, ಪತ್ರಿಯೊಂದು ದಿನಸಿ ವಸ್ತುಗಳ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಅಕ್ಕಿ, ಬೇಳೆ, ರವೆ, ಬಟಾಣಿ, ಒಂದು ಟಿನ್ ಬಾಕ್ಸ್ ಎಣ್ಣೆ ಮುಂತಾದವುಗಳ ನೋಡಿದ್ದಲ್ಲದೆ, ಅವುಗಳ ಸ್ಯಾಂಪಲ್(ಮಾದರಿ) ತೆಗೆದುಕೊಂಡರು. ಈ ಆಹಾರ ಸಾಮಾಗ್ರಿಗಳ ಗುಣಮಟ್ಟ ತಿಳಿಯುವುದಕ್ಕಾಗಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಿ ವರದಿ ತರಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಅಲ್ಲಿಯ ಅಡುಗೆ ಸಿಬ್ಬಂದಿಯ ಯೋಗ-ಕ್ಷೇಮ ವಿಚಾರಿಸಿದ ಅವರು, ದಿನಕ್ಕೆ ಎಷ್ಟು ಗಂಟೆ ಕೆಲಸ ಮಾಡುತ್ತೀರಾ ಎಂದು ವಿಚಾರಿಸಿದರು.
ನಂತರ ಸ್ವಸ್ತಿಕ್ ನಗರದಲ್ಲಿ ಅಮೃತ್ ಯೋಜನೆಯಡಿ ಅಭಿವೃದ್ಧಿ ಪಡಿಸಿರುವ 90..50 ಲಕ್ಷ ರೂಪಾಯಿ ವೆಚ್ಚದ ಸಾರ್ವಜನಿಕ ಉದ್ಯಾನವನ ವೀಕ್ಷಿಸಿದರು. ಸಾರ್ವಜನಿಕರಿಗೆ ಅನುಕೂಲವಾಗಲು ಪ್ರತಿನಿತ್ಯ ಸ್ವಚ್ಛತೆ ಕಾಪಾಡಲು ಕ್ರಮವಹಿಸಬೇಕೆಂದು ಅವರು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ, ಕಪನೂರ ಒಳಚರಂಡಿ ಶುದ್ಧೀಕರಣ ಯೋಜನೆ (ಘಟಕ)ಕ್ಕೆ ಭೇಟಿ ನೀಡಿದ ಸಚಿವರು, ಇಂಜಿನಿಯರ್‍ಗಳಿಂದ ಮಾಹಿತಿ ಪಡೆದುಕೊಂಡರು. ಈ ಘಟಕದ ನಿರ್ಮಾಣದ ಅಂದಾಜು ವೆಚ್ಚ 1765.99 ಲಕ್ಷ ರೂಪಾಯಿಗಳಾಗಿದ್ದು, ಒಟ್ಟು ವೆಚ್ಚ 1908.40 ಲಕ್ಷ ರೂಪಾಯಿಗಳಾಗಿದೆ. 25 ಎಂಎಲ್‍ಡಿ ಸಾಮಥ್ರ್ಯದ ಈ ಶುದ್ಧೀಕರಣ ಘಟಕದಿಂದ ಶುದ್ಧೀಕರಣಗೊಂಡ ನೀರನ್ನು ಕಾಲುವೆ ಹರಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅಜುಂ ಪರ್ವೇಜ್, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರಾದ ಬಿ. ಫೌಜಿಯಾ ತರನ್ನಮ್, ಕಲಬುರಗಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಅಭಿಯಂತರರಾದ ದಿನೇಶ್ ಕುಮಾರ್, ಮಹಾನಗರಪಾಲಿಕೆ ಕಾರ್ಯನಿರ್ವಾಹಕ ಅಭಿಯಂತರರಾದ ಶಿವನಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...