ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಜಿಲ್ಲಾಸ್ಪತ್ರೆಗೆ ಮೂಲಭೂತ ಸೌಲಭ್ಯ- ಅಬಕಾರಿ ಸಚಿವ ಹೆಚ್ ನಾಗೇಶ್

Source: sonews | By Staff Correspondent | Published on 25th November 2020, 10:49 PM | State News |

ಕೋಲಾರ : ಕೋವಿಡ್ ಸಂದರ್ಭದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಜಿಲ್ಲಾಸ್ಪತ್ರೆಗೆ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತದಲ್ಲಿ ಉನ್ನತ ಮಟ್ಟದಲ್ಲಿ ಮೂಲಭೂತ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಅಬಕಾರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ತಿಳಿಸಿದರು. 

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಕೋಲಾರ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತವನ್ನು ಗಣಿ ಬಾದಿತ ಗ್ರಾಮಗಳಲ್ಲಿ ವಿನಿಯೋಗಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

15-20 ವರ್ಷಗಳ ಹಿಂದೆ ನಿರ್ಮಿಸಿರುವ ಕೋಲ್ಡ್ ಸ್ಟೋರೆಜ್‌ನ್ನು ನವೀಕರಿಸಬೇಕು. ಜಿಲ್ಲೆಯಲ್ಲಿ ಅನೇಕ ಜನರು ಕಲ್ಲು ಒಡೆಯುವ ವೃತ್ತಿಯಲ್ಲಿ ತೊಡಗಿಕೊಂಡಿದ್ದು, ಎಲ್ಲರೂ ಬಡವರು ಆಗಿದ್ದಾರೆ . ಅದ್ದರಿಂದ ಅವರಿಗೆ ಕ್ಷೇತ್ರವಾರು ಪರವಾನಗಿ ನೀಡಿದರೆ ಅವರ ಜೀವನೋಪಾಯಕ್ಕೆ ಆಧಾರವಾಗುತ್ತದೆ ಎಂದು ತಿಳಿಸಿದರು. 

ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್ ಮುನಿಸ್ವಾಮಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಲ್ಲು ಒಡೆಯುವ ಕೆಲಸದಲ್ಲಿ ತೊಡೆದುಕೊಂಡಿರವರ ಬಗ್ಗೆ ಸರ್ವೆ ಮಾಡಬೇಕು. ಪರವಾನಗಿ ನೀಡುವ ಸಂದರ್ಭದಲ್ಲಿ ಮೊದಲ ಆದ್ಯತೆಯನ್ನು ಜಿಲ್ಲೆಯ ಜನರಿಗೆ ನೀಡಬೇಕು. 

ತಮಿಳುನಾಡು ಮತ್ತು ಆಂಧ್ರದಿಂದ ಬಂದು ಅನಧಿಕೃತ ಗ್ರಾನೈಟ್ ಮಾರಾಟ ಮಾಡುತ್ತಿದ್ದಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಭೂ ವಿಜ್ಞಾನಿ ಅಧಿಕಾರಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ಅವರು ಮಾತನಾಡಿ ಸರ್ಕಾರದಿಂದ ಕೋವಿಡ್‌ಗೆ ಫಂಡ್ ಅಂತ ಯಾವುದೇ ವಿಶೇಷ ಅನುದಾನ ಬರುವುದಿಲ್ಲ. ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹವಾಗಿರುವ ಮೊತ್ತದಲ್ಲಿ ಕೋವಿಡ್ ನಿರ್ವಹಣೆಗೆ 30 % ಹಣವನ್ನು ಮೀಸಲಿಡಲಾಗಿದೆ. ಜಿಲ್ಲಾಸ್ಪತ್ರೆಗೆ ಕಾಂಪೌಂಡ್ ಅತ್ಯಂತ ಅವಶ್ಯಕವಾಗಿದ್ದು, ಎಂ.ಪಿ. ಮತ್ತು ಎಂ.ಎಲ್.ಎ.ಗಳ ಫಂಡ್‌ನಲ್ಲಿ ಕಾಂಪೌಂಡ್ ನಿರ್ಮಾಣವಾಗಬೇಕು. ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ವೈದ್ಯರಿದ್ದು, ರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸಗೌಡ, ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ನಂಜೇಗೌಡ, ಕೆ.ಜಿ.ಎಫ್. ವಿಧಾನಸಭಾ ಕ್ಷೇತ್ರದ ಶಾಸಕ ರೂಪಕಲಾ ಶಶಿಧರ್, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ.ಎಸ್.ವೆಂಕಟೇಶ್, ಅಪರ ಜಿಲ್ಲಾಧಿಕಾರಿಗಳಾದ ಸ್ನೇಹಾ, ಸೇರಿದಂತೆ ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ರಾಜ್ಯದಲ್ಲಿ ಟ್ರ್ಯಾಕ್ಟರ್‌ ಪರೇಡ್‌: ಬೆಳಗಾವಿ ರೈತರಿಗೆ ಆರ್‌ಟಿಒ, ಪೊಲೀಸರಿಂದ ವಾಹನ ಜಪ್ತಿ ಬೆದರಿಕೆ

ಬೆಳಗಾವಿ : ಕೃಷಿ ಕಾಯ್ದೆ ವಿರೋಧಿಸಿ ಜ. 26ರಂದು ದೆಹಲಿಯಲ್ಲಿ ರೈತರು ನಡೆಸುತ್ತಿರುವ ಟ್ರ್ಯಾಕ್ಟರ್‌ ಪರೇಡ್‌ ಬೆಂಬಲಿಸಿ ರಾಜ್ಯದಲ್ಲೂ ...

ಪಿಎಂಜಿಎಸ್ ವೈ ರಸ್ತೆಗಳುದ್ದಕ್ಕೂ ಗುತ್ತಿಗೆದಾರರ ಹೆಸರು ವಿಳಾಸದ ಫಲಕ ಹಾಕಿ ನಿರ್ವಹಣೆ ಕುರಿತು ಜನರಿಗೆ ಮಾಹಿತಿ ನೀಡಿ-ಕೇಂದ್ರ ಸಚಿವ ಪ್ರಲ್ಹಾದ ಜೋಷಿ

ಧಾರವಾಡ : ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಿಸಿದ ಗ್ರಾಮೀಣ ಭಾಗದ ರಸ್ತೆಗಳುದ್ದಕ್ಕೂ ಜನದಟ್ಟಣೆ ಇರುವ 3-4 ಸ್ಥಳಗಳಲ್ಲಿ ...

ಬೆಳೆ ಪರಿಹಾರ ಪಾವತಿ ವಿಳಂಬಕ್ಕೆ ಕಾರಣವಾದ ತಾಂತ್ರಿಕ ಅಂಶಗಳನ್ನು ಸರಿಪಡಿಸಿ ರೈತರ ಖಾತೆಗಳಿಗೆ ಪರಿಹಾರ ಜಮೆ ಮಾಡಲು ಕ್ರಮ ಕೈಗೊಳ್ಳಿ - ಸಚಿವ ಜಗದೀಶ ಶೆಟ್ಟರ್

ಧಾರವಾಡ : ರೈತರ ಹಿತಕಾಯಲು ಸರ್ಕಾರ ಅನುಷ್ಠಾನಕ್ಕೆ ತಂದಿರುವ ಬೆಳೆ ಪರಿಹಾರವನ್ನು ಸಕಾಲದಲ್ಲಿ ರೈತ ಸಮುದಾಯಕ್ಕೆ ತಲುಪಿಸಲು ...

ಮತದಾನ ಪ್ರತಿಯೊಬ್ಬ ವಯಸ್ಕ ನಾಗರಿಕನ ಹಕ್ಕು; ತಪ್ಪದೇ ಮತ ಚಲಾಯಿಸಿ: ಉಪನಿರ್ದೇಶಕ ಚಿದಂಬರ.ಕೆ.

ಧಾರವಾಡ : ಭಾರತದ ಸಂವಿಧಾನವು ರಾಷ್ಟ್ರದ ಪ್ರಜೆಗಳಿಗೆ ಸಕ್ರೀಯವಾಗಿ ಆಡಳಿತದಲ್ಲಿ ಪಾಲ್ಗೋಳ್ಳಲು ಸಹಾಯವಾಗುವಂತೆ ಪ್ರತಿಯೊಬ್ಬ ವಯಸ್ಕ ...