ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದಕ್ಕೆ ಸೇರ್ಪಡೆ ಮಾಡಲು ಒತ್ತಾಯ

Source: S.O. News Service | By MV Bhatkal | Published on 7th July 2019, 6:56 PM | Coastal News | Don't Miss |

ಕಾರವಾರ: ‘ಪದವಿ ವಿದ್ಯಾರ್ಹತೆ ಮತ್ತು ಸೇವಾನುಭವ ಪಡೆದಿರುವ ಸೇವಾನಿರತ ಪ್ರಾಥಮಿಕ ಶಾಲಾ ಸಹ ಶಿಕ್ಷಕರು ಹಾಗೂ ಪದವೀಧರ ಶಾಲಾ ಸಹ ಶಿಕ್ಷಕರನ್ನು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದಕ್ಕೆ ಸೇರ್ಪಡೆ ಮಾಡಬೇಕು’ ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಮೌನ ಮೆರವಣಿಗೆ ನಡೆಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ, ತಹಶೀಲ್ದಾರರು ಹಾಗೂ ಜಿಲ್ಲಾ ನೌಕರ ಸಂಘದ ಅಧ್ಯಕ್ಷರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
‘ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು. ಅವರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯ ಪಿಂಚಣಿಯನ್ನೇ ಮುಂದುವರಿಸಬೇಕು’ ಎಂದು ಅವರು ಒತ್ತಾಯಿಸಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಆರ್‌.ಪಿ.ಗೌಡ, ಪ್ರಮುಖರಾದ ಸಾವಿತ್ರಿ ದೇಶಭಂಡಾರಿ, ಮಮತಾ ಪೈ, ಅನುಪಮಾ ನಾಯಕ, ನಾಗವೇಣಿ ನಾಯ್ಕ ಇದ್ದರು.

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...