ಸಚಿವರಿಂದ ಕಾಮಗಾರಿಗಳ ಪರಿಶೀಲನೆ ಚೆಕ್‍ಡ್ಯಾಂ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿ : ಸಚಿವ ಕೃಷ್ಣಭೈರೇಗೌಡ

Source: so news | By MV Bhatkal | Published on 19th June 2019, 9:15 PM | State News | Don't Miss |

ಶಿವಮೊಗ್ಗ:ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಅವರು ಜಿಲ್ಲೆಯ ವಿವಿಧ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು.
ಮಲೆನಾಡಿನಲ್ಲಿ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಚೆಕ್‍ಡ್ಯಾಂಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾದ ಅನಿವಾರ್ಯತೆ ಇದೆ ಎಂದರು.
ರಿಪ್ಪನ್‍ಪೇಟೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು, ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನ, ಕಸ ವಿಲೇವಾರಿ ವ್ಯವಸ್ಥೆ, ಕರ ಸಂಗ್ರಹಣೆ ಕುರಿತು ಆಗಿರುವ ಪ್ರಗತಿ ಪರಿಶೀಲಿಸಿದರು.
ಉದ್ಯೋಗ ಖಾತ್ರಿ ಯೋಜನೆಯಡಿ ಕೇವಲ ರಸ್ತೆಗಳ ನಿರ್ಮಾಣಕ್ಕೆ, ಇತ್ಯಾದಿಗಳಿಗೆ ಮಾತ್ರ ಗಮನಹರಿಸದೇ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಚೆಕ್‍ಡ್ಯಾಂಗಳನ್ನು ನಿರ್ಮಿಸಲು ಆದ್ಯತೆ ನೀಡಬೇಕು. ಕೂಲಿ ಮತ್ತು ವೆಚ್ಚ ಸರಿದೂಗಿಸಲು ಅಗತ್ಯ ನಾಲೆಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಬಹುದಾಗಿದೆ ಎಂದರು.
ರಿಪ್ಪನ್‍ಪೇಟೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ಕಸ ವಿಂಗಡಣಾ ಘಟಕಕ್ಕೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 400 ಮನೆಗಳಿದ್ದು, ಕಸವನ್ನು ಸಂಗ್ರಹಿಸಲಾಗುತ್ತಿದೆ. ಆದರೆ, ಎಲ್ಲರೂ ಒಣಕಸ ಮತ್ತು ಹಸಿಕಸ ವಿಂಗಡಿಸಿ ನೀಡದಿರುವುದು ಗಮನಕ್ಕೆ ಬಂದಿದೆ. ಕಸ ವಿಂಗಡಣಾ ಘಟಕದಲ್ಲಿ ಕೂಲಿ ಕಾರ್ಮಿಕರು ಕಸವನ್ನು ಪುನಃ ವಿಂಗಡಿಸುವ ಪರಿಸ್ಥಿತಿ ಇದೆ. ಪ್ರತಿಯೊಬ್ಬರೂ ಒಣ ಮತ್ತು ಹಸಿ ಕಸ ವಿಂಗಡಿಸಿ ನೀಡುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎಂದವರು ನುಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ ಸಂಗ್ರಹಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದ ಅವರು, 16ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿರುವ ಗವಟೂರು ಚೆಕ್‍ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುರಪ್ಪೆಮನೆ ಗ್ರಾಮದಲ್ಲಿ ನಿರ್ಮಿಸಿರುವ ಕಾಲುಸಂಕ ವೀಕ್ಷಿಸಿದರು. ಚೆಕ್ ಡ್ಯಾಂ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಈಗಲೇ ಪರಿಸ್ಥಿತಿ ಕೈಮೀರುತ್ತಿದ್ದು, ಜನರು ಎಚ್ಚೆತ್ತುಕೊಳ್ಳಬೇಕು ಎಂದರು.
ಈ ಎಲ್ಲಾ ಭೇಟಿಯ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಅಧಿಕಾರಿ-ಸಿಬ್ಬಂಧಿಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...