ವಿವಿಧ ಕಾರ್ಯಕ್ರಮಗಳಲ್ಲಿ ಯುವಕರು ಪಾಲ್ಗೊಳ್ಳುವಂತೆ ಪ್ರೇರೇಪಿಸಿ: ಅಪರ ಜಿಲ್ಲಾಧಿಕಾರಿ ವಿ.ಆರ್ ಶೈಲಜಾ

Source: SO News | By Laxmi Tanaya | Published on 4th September 2021, 10:18 PM | State News | Don't Miss |

ಮಂಡ್ಯ : ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಯುವಕರಿಗೆ ತಿಳಿಸಿ ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಮಾಡಬೇಕು ಮತ್ತು ಗ್ರಾಮೀಣ ಭಾಗದ ಯುವಕರನ್ನು ವಿವಿಧ ಅಭಿಯಾನ ಮತ್ತು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿ ಎಂದು ಅಪರ ಜಿಲ್ಲಾಧಿಕಾರಿ ವಿ‌.ಆರ್ ಶೈಲಜಾ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೆಹರು ಯುವ ಕೇಂದ್ರದ ವತಿಯಿಂದ ನಡೆದ ಜಿಲ್ಲಾ ಯುವ ಕಾರ್ಯಕ್ರಮಗಳ ಸಲಹಾ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳು ಮತ್ತು ವಿವಿಧ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದರು.

ಕರೋನಾ ವೈರಸ್ ಕುರಿತು ಜನರು ನಿರ್ಲಕ್ಷ್ಯ ಭಾವನೆ ತೋರುತ್ತಿದ್ದು, ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಪಾಲನೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಗ್ರಾಮೀಣ ಭಾಗದ ಯುವಕರಿಗೆ ತಂತ್ರಜ್ಞಾನ ಬಳಕೆ ಬಗ್ಗೆ ಅರಿವು ಮೂಡಿಸಿ. 
ಯುವಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಿ, ಪ್ರಶಸ್ತಿಗಳನ್ನು ನೀಡಿ. ಶ್ರಮಧಾನ್ , ಸ್ವಚ್ಛ ಭಾರತ್ ಮಿಷನ್ ಯಡಿಯಲ್ಲಿ ಶ್ರಮದಾನ, ಸ್ವಚ್ಚತಾ ಕಾರ್ಯಗಳನ್ನು ಕೈಗೊಳ್ಳಬೇಕು. ಸಾಮಾಜಿಕ ಕಾರ್ಯದಲ್ಲಿ ಯೂತ್ ಕ್ಲಬ್, ಎನ್.ಎಸ್‌.ಎಸ್ ನವರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಿ ಎಂದರು.

ಅಜಾದಿ ಕಾ ಅಮೃತ್ ಮಹೋತ್ಸವ ಪ್ರಯುಕ್ತ   ರಾಷ್ಟ್ರ ವ್ಯಾಪಿ ಫಿಟ್ ಇಂಡಿಯಾ ಫ್ರೀಡಂ ರನ್ 2.0 ನಡೆಯುತ್ತಿದ್ದು, ಪ್ರತಿವಾರ ಕಾರ್ಯಕ್ರಮಗಳು 75 ಜಿಲ್ಲೆಗಳಲ್ಲಿ ಮತ್ತು 75 ಹಳ್ಳಿಗಳಲ್ಲಿ ಅಕ್ಟೋಬರ್ 2 ವರೆಗೆ ಪ್ರತಿ ಜಿಲ್ಲೆಗಳಲ್ಲಿ ನಡೆಯಲಿದೆ ಎಂದರು.

ಇದೇ ಕಾರ್ಯಕ್ರಮವೂ ಸೆಪ್ಟೆಂಬರ್ 25 ರಂದು ಜಿಲ್ಲಾಡಳಿತ, ಜಿ.ಪಂ, ನೆಹರು ಯುವ ಕೇಂದ್ರ, ಎನ್‌‌.ಎಸ್.ಎಸ್, ಎನ್‌.ಸಿ.ಸಿ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ,ಎನ್ ಜಿ ಒ ಮತ್ತು ಯುವಜನ ಸಂಘಟನೆ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳ ಸಹಕಾರದಿಂದ ನಡೆಯಲಿದೆ ಎಂದರು.

ನೆಹರು ಯುವಕೇಂದ್ರದ ಯುವ ಅಧಿಕಾರಿಗಳು 2021-22 ವಾರ್ಷಿಕ ಕ್ರಿಯಾಯೋಜನೆ ಕುರಿತು ಸಭೆಯಲ್ಲಿ ವಿವರಿಸಿದರು.

ಸಭೆಯಲ್ಲಿ ಜಿ.ಪಂನ ಕಾರ್ಯದರ್ಶಿ ಧನರಾಜ್, ನೆಹರು ಯುವ ಕೇಂದ್ರದ ಯುವ ಅಧಿಕಾರಿ ವಿನಯ್ ಕುಮಾರ್ ,  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉದಯಕುಮಾರ್, ವಾರ್ತಾಧಿಕಾರಿ ಟಿ‌‌.ಕೆ ಹರೀಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ಶಿವಲಿಂಗಯ್ಯ, ಜಿಲ್ಲಾ ಕ್ಷಯಾರೋಗ ಮತ್ತು ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ.ಅನಿಲ್ ಕುಮಾರ್ , ನೆಹರು ಯುವಕೇಂದ್ರದ ಲೆಕ್ಕಾಧಿಕಾರಿ ಹೆಚ್ .ಎಂ. ಬಸವರಾಜು ಹಾಗೂ ಮತ್ತಿತರರು ಉಪಸ್ಥಿತರಿದ್ದರು

Read These Next

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ನ್ಯಾಮತಿ ತಾಲ್ಲೂಕು ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿ ಗಳ ನಡೆ ಹಳ್ಳಿ ಕಡೆ- ಗ್ರಾಮವಾಸ್ತವ್ಯಕ್ಕೆ ಚಾಲನೆ

ದಾವಣಗೆರೆ : ಕೊರೊನಾ ಕಾರಣ ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ...

ಬಾಗಲಕೋಟೆಯಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ; ಪಾಪ್ಯುಲರ್ ಫ್ರಂಟ್ ಕಳವಳ

ಬಾಗಲಕೋಟೆಯ ಜಿಲ್ಲೆಯ ಇಳಕಲ್ ನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಂಘಪರಿವಾರದ ಹಿನ್ನೆಲೆಯ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ...

ಭಟ್ಕಳ: ಶ್ರೀವಲಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪವಿತ್ರಾ ನಾಯ್ಕ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ

ಶ್ರೀವಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಪವಿತ್ರಾ ಜಯಕರ ನಾಯ್ಕ ದಿಶಾ ಭಾರತ ಸಂಸ್ಥೆ ಹಾಗೂ ಈಸ್ಟ್ ವೆಸ್ಟ್ ...

ಅಕ್ಟೋಬರ್ 20 ರಂದು ಭಟ್ಕಳದಲ್ಲಿ 16ವರ್ಷದೊಳಗಿನ ಬಾಲಕರ ಕ್ರಿಕೆಟ್ ತಂಡದ ಆಯ್ಕೆ ಟ್ರಯಲ್ಸ್

ಭಟ್ಕಳ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅಕ್ಟೋಬರ್ 20 ರಂದು ಭಟ್ಕಳದಲ್ಲಿ ಭಟ್ಕಳ ಕ್ರೀಡಾ ಅಕಾಡೆಮಿ ಆಶ್ರಯದಲ್ಲಿ ನಡೆಯಲಿದೆ. ...