ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲು ಸೂಚನೆ

Source: S.O. News Service | By I.G. Bhatkali | Published on 19th April 2020, 12:01 AM | State News |

ಬೆಂಗಳೂರು: ಕೂಡಲೇ ನಿಯಮಾವಳಿಯನ್ನು ಅಂತಿಮಗೊಳಿಸಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಳೆದ ಬಜೆಟ್ ಅಧಿವೇಶನದಲ್ಲಿ ಅನುಮೋದನೆ ಪಡೆದುಕೊಂಡಿರುವ ಶಿಕ್ಷಕರ ವರ್ಗಾವಣೆ ನಿಯಂತ್ರಣ ಕಾಯ್ದೆ ಅನ್ವಯ ಪ್ರಸಕ್ತ ಶೈಕ್ಷಣಿಕ ಸಾಲಿನ ವರ್ಗಾವಣೆ ವೇಳಾಪಟ್ಟಿಗೆ ಸಂಬಂಧಿಸಿದ ಪ್ರಕ್ರಿಯೆಗೆ ಚಾಲನೆ ನೀಡಲು ತಿಳಿಸಿದ್ದಾರೆ.

ಶಿಕ್ಷಣ ಇಲಾಖೆಯ ಯುಟ್ಯೂಬ್ ಚಾನೆಲ್‍ನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪುನರ್ಮನನ ತರಗತಿ ಮೂಲಕ ಅಗತ್ಯ ಮಾಹಿತಿ ನೀಡಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಮುಂದಿನ ಶೈಕ್ಷಣಿಕ ಸಾಲಿನ ಅವಧಿ ಮತ್ತು ಕೆಲವು ಶಾಲೆಗಳಲ್ಲಿ ಆನ್ಲೈನ್ ತರಗತಿ ನಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸಚಿವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Read These Next

ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣ ಕುರಿತು ಚರ್ಚೆ

ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣ ಕುರಿತು ಚರ್ಚೆ

ಕೋವಿಡ್ ನಿಯಂತ್ರಣ ಕಾರ್ಯ ನಿರ್ಲಕ್ಷಿಸುವ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಕೋವಿಡ್ ನಿಯಂತ್ರಣ ಕಾರ್ಯ ನಿರ್ಲಕ್ಷಿಸುವ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ