ಸಚಿವರಿಂದ ಕೊವಿಡ್-19 ಸೋಂಕು ನಿಯಂತ್ರಣ ಪರಿಣಾಮಕಾರಿ ಕ್ರಮಕ್ಕೆ ಸೂಚನೆ

Source: SONEWS | Published on 8th July 2020, 7:14 PM | State News | Don't Miss |

 
ನರಗುಂದ: ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಕೊವಿಡ್-19 ಸೋಂಕು ನಿಯಂತ್ರಣ ಕುರಿತ ನರಗುಂದ ತಾಲೂಕಿನ ಅಧಿಕಾರಿಗಳ ಸಭೆ ನಡೆಸಿದರು.
ಕೊವಿಡ್-19 ಸೋಂಕು ಗ್ರಾಮೀಣ ಭಾಗಕ್ಕೂ ವ್ಯಾಪಿಸುತ್ತಿದೆ. ನಗರ ಮತ್ತು ಗ್ರಾಮೀಣ ಪ್ರದೇಶಗಳ ವಾರ್ಡ ಮಟ್ಟದಲ್ಲಿ  ಈ ಸೋಂಕು ನಿಯಂತ್ರಣಕ್ಕೆ ಜನರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ ಧರಿಸುವದು, ಸಾಮಾಜಿಕ ಅಂತರ ಕಾಯ್ದುಕೊಂಡು ಕೈಗಳನ್ನು ಆಗಾಗ ಸ್ವಚ್ಛಗೊಳಿಸುವ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಹೊರ ಜಿಲ್ಲೆಗಳಿಂದ ಆಗಮಿಸುವವರ ಮೇಲೆ ನಿಗಾ ವಹಿಸಬೇಕು. ಸೋಂಕು ದೃಢ ಪಟ್ಟ ಪ್ರಕರಣಗಳಲ್ಲಿ ತಕ್ಷಣ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತ ವ್ಯಕ್ತಿಗಳ ಗಂಟಲು ದ್ರವ ಪರೀಕ್ಷೆ, ಅವರನ್ನು ಪ್ರತ್ಯೇಕವಾಗಿ ಇರಿಸುವ ಕ್ರಮಗಳನ್ನು ಜವಾಬ್ದಾರಿಯಿಂದ ಪಾಲಿಸಬೇಕು ಎಂದು ಸಚಿವರು ನುಡಿದರು.
ತಾಲೂಕಿನ ಕಂಟೇನ್ಮೆಂಟ ಪ್ರದೇಶಗಳ ಜನರ ಅವಶ್ಯಕ ವಸ್ತುಗಳ ಪೂರೈಕೆ, ಸಾಂಸ್ಥಿಕ ದಿಗ್ಭಂಧನದಲ್ಲಿ ಇರುವವರಿಗೆ ಸರಿಯಾದ ಉಟೋಪಹಾರದ ವ್ಯವಸ್ಥೆ ಕುರಿತು ಚರ್ಚಿಸಿದ ಸಚಿವರು, ಒಟ್ಟಾರೆ ತಾಲೂಕಿನ ಕೊವಿಡ್-19 ನಿಯಂತ್ರಣ ಪರಿಣಾಮಕಾರಿಯಾಗಿ ಜರುಗಿಸಲು ಅಧಿಕಾರಿಗಳು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ ಸಮರ್ಪಕ ನಿರ್ವಹಣೆ ನಡೆಸಲು ಮತ್ತು ಯಾವುದೇ ಇಲಾಖೆಯ ಕೊವಿಡ್-19 ವಾರಿಯರ್ಸ ಇರಲಿ ಅವರು ತಮ್ಮ ಸುರಕ್ಷತೆಗೂ  ಕಡ್ಡಾಯವಾಗಿ ಗಮನ ನೀಡಲು ಸಚಿವರು ಸೂಚಿಸಿದರು.
ಸಭೆಯಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ತದನಂತರ ಸಚಿವ ಸಿ.ಸಿ. ಪಾಟೀಲ ತಾಲೂಕಿನಲ್ಲಿ  ಕೊವಿಡ್-19 ಸೋಂಕು ಪ್ರಕರಣ ಹೆಚ್ಚಾದಲ್ಲಿ ಮನ್ನೆಚ್ಚರಿಕೆ ಕ್ರಮವಾಗಿ ಬಸವೇಶ್ವರ ಸಮುದಾಯ ಭವನವನ್ನು ಕೋವಿಡ್ ಆಸ್ಪತ್ರೆಯಾಗಿ ಮಾಡುವ ಸಲುವಾಗಿ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

Read These Next

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಹೊನ್ನಾವರ ಠಾಣೆಯ ಪೊಲೀಸರು

ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಹೊನ್ನಾವರ ಠಾಣೆಯ ಪೊಲೀಸರು

ಭಟ್ಕಳ; ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಕೋವಿಡ್-19 ‘ಮರಳಿ ಸೃಷ್ಟಿಕರ್ತನ ಕಡೆಗೆ ಆಬಿಯಾನ’ಕ್ಕೆ ಚಾಲನೆ

ಭಟ್ಕಳ: ಇತ್ತಿಚೆಗೆ ನಡೆಯುತ್ತಿರುವ ಘಟನೆಗಳು ಮಾನವನನ್ನು ಎಚ್ಚರಿಸುತ್ತಿದ್ದು, ಮನುಷ್ಯರನ್ನು ಸರಿದಾರಿಗೆ ತರಲು ದೈವಿಕ ...

ಭಟ್ಕಳ: 60 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನದ ಬಿಸ್ಕತ್ ವಶ; ಪೊಲೀಸರ ಬಲೆಗೆ ಬಿದ್ದ ಶೈಲೇಶ್ ಮತ್ತು ವಿಫುಲ್

ಭಟ್ಕಳ: ಇಲ್ಲಿನ ಹೂವಿನ ಚೌಕ್ ಕ್ರಾಸ್ ಬಳಿ 60 ಲಕ್ಷ ಮೌಲ್ಯದ 1.5ಕೆಜಿ ಬಂಗಾರದ ನಮೂನೆಯ ಬಿಸ್ಕಿಟ್ ಮತ್ತು ಎಂಟು ಚಿನ್ನದ ಗಟ್ಟಿಗಳನ್ನು ...