ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಅಗತ್ಯವಾದ ಕ್ರಮಕ್ಕೆ ಸೂಚನೆ : ಪೂನಂ

Source: SO News | By Laxmi Tanaya | Published on 23rd April 2024, 8:42 AM | State News |

ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ ಅವರು ತಿಳಿಸಿದರು.

     ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.22 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮತಕ್ಷೇತ್ರಗಳ ಎಆರ್‍ಓ ಮತ್ತು ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

     14-ಲೋಕಸಭಾ ಕ್ಷೇತ್ರ ಕ್ಕೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ, 112-ಭದ್ರಾವತಿ, 113-ಶಿವಮೊಗ್ಗ, 114-ತೀರ್ಥಹಳ್ಳಿ, 115-ಶಿಕಾರಿಪುರ, 116ಸೊರಬ, 117-ಸಾಗರ ಮತ್ತು 118 ಬೈಂದೂರು ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಅಬಕಾರಿ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಹಾಗೂ ಚುನಾವಣೆಗೆ ಸಂಬಂಧಿಸಿದ ವಿವಿಧ ಸಮಿತಿ, ತಂಡಗಳ ನೋಡಲ್ ಅಧಿಕಾರಿಗಳಿಂದ ಅವರ ಕಾರ್ಯಕ್ಷೇತ್ರದ ಕುರಿತು ಸಭೆಯಲ್ಲಿ ಮಾಹಿತಿ ಪಡೆದುಕೊಂಡ ಅವರು ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಇತರೆ ತಂಡಗಳ ನೋಡಲ್ ಅಧಿಕಾರಿಗಳು ಸುಗಮವಾಗಿ ಮತದಾನ ಆಗುವ ನಿಟ್ಟಿನಲ್ಲಿ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.

    ಪ್ರತಿ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ಮತಕ್ಷೇತ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಮತ ಕ್ಷೇತ್ರಗಳ ಸೂಕ್ಷ್ಮತೆಯನ್ನು ಅರಿತುಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿ ಚೆಕ್‍ಪೋಸ್ಟ್ ಗಳಲ್ಲಿ ಎಚ್ಚರಿಕೆಯಿಂದ ಪರಿಶೀಲನೆ ಕೈಗೊಳ್ಳಬೇಕು.

    ಪ್ರತಿ ಮನೆ ಮನೆಗಳಿಗೆ ತೆರಳಿ ಮತದಾರರ ಮಾಹಿತಿ ಸ್ಲಿಪ್‍ಗಳನ್ನು ವಿತರಿಸಬೇಕು. ವಿಶೇಷವಾಗಿ ದೂರದ ಹಳ್ಳಿ/ಪ್ರದೇಶಗಳಲ್ಲಿ ಸಮರ್ಪಕವಾಗಿ ವಿತರಣೆ ಮಾಡಬೇಕು. ಮತದಾರರ ಮಾಹಿತಿ ಸ್ಲಿಪ್ ವಿತರಣೆ ವೇಳೆ ಮತದಾರರ ಬೂತ್ ಮತ್ತು ಇತರೆ ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸಬೇಕು.

            ಮತದಾನಕ್ಕೆ ಸಂಬಂಧಿಸಿದಂತೆ ಇವಿಎಂ, ಅಣಕು ಮತದಾನ, ಇವಿಎಂ ಡಾಟಾ, ಬ್ಯಾಟರಿ, ಯೂಸರ್ ಬಟನ್ ಬಳಕೆ ಸೇರಿದಂತೆ ಎಲ್ಲ ಮಾಹಿತಿ ಎಸ್‍ಓಪಿ ಯಲ್ಲಿದ್ದು ಸಂಬಂಧಿಸಿದ ಅಧಿಕಾರಿಗಳು ಎಸ್‍ಓಪಿ ಯನ್ನು ಸಮರ್ಪಕವಾಗಿ ಓದಿಕೊಳ್ಳಬೇಕೆಂದು ಸೂಚನೆ ನೀಡಿದ ಅವರು ಎಲ್ಲ ಮತಕ್ಷೇತ್ರಗಳಲ್ಲಿ ಅಧಿಕಾರಿಗಳ ರಿಜಿಸ್ಟರ್ ಸೇರಿದಂತೆ ಇತರೆ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದರು. 

       ನಾನು ಭದ್ರಾವತಿ ಮತಕ್ಷೇತ್ರದಲ್ಲಿ ಸ್ಟ್ರಾಂಗ್ ರೂಂ, ವಲ್ನರಬಲ್, ಶ್ಯಾಡೋ ಮತಗಟ್ಟೆಗಳನ್ನು ಈಗಾಗಲೇ ಪರಿಶೀಲಿಸಿದ್ದು, ಇನ್ನುಳಿದ ಮತಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದ ಅವರು ಪ್ರತಿ ಮತಕ್ಷೇತ್ರಗಳ ಮತಗಟ್ಟೆಗಳು, ಮತದಾರರ ಪಟ್ಟಿ, ಕ್ರಿಟಿಕಲ್, ವಲ್ನರಬಲ್, ಪಿಡಬ್ಲ್ಯುಡಿ, ಸಖಿ, ಯುವ ಮತದಾರರ ಮತಗಟ್ಟೆಗಳ ಮಾಹಿತಿ, ಚೆಕ್‍ಪೋಸ್ಟ್, ವಶಕ್ಕೆ ಪಡೆಯಲಾದ ಅಕ್ರಮ ಹಣ, ಮದ್ಯದ ವಿವರ, ದಾಖಲಿಸಲಾದ ಪ್ರಕರಣಗಳು, ಅಧಿಕಾರಿ/ಸಿಬ್ಬಂದಿಗಳಿಗೆ ನೀಡಲಾದ ತರಬೇತಿಗಳ ಕುರಿತು  ಮಾಹಿತಿ ಪಡೆದುಕೊಂಡು ಸೂಕ್ತ ಸಲಹೆ, ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

    ವೆಚ್ಚ ವೀಕ್ಷಕರಾದ ಮೀನಾಕ್ಷಿ ಸಿಂಗ್ ಮಾತನಾಡಿ, ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ಜಾಗರೂಕತೆಯಿಂದ ಪರಿಶೀಲನೆ ನಡೆಸಬೇಕು. ಯಾವುದಾದರೂ ಚೆಕ್‍ಪೋಸ್ಟ್‍ಗೆ ಹೆಚ್ಚುವರಿ ಅಧಿಕಾರಿ, ಸಿಬ್ಬಂದಿಗಳ ಅವಶ್ಯಕತೆ ಇದ್ದಲ್ಲಿ ತಿಳಿಸಬೇಕು ಎಂದರು.
    ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಎಲ್ಲ ಸಹಾಯಕ ಚುನಾವಣಾಧಿಕಾರಿಗಳು, ಎಫ್‍ಎಸ್‍ಟಿ, ಎಸ್‍ಎಸ್‍ಟಿ, ಇತರೆ ತಂಡಗಳು ಮತ್ತು ಸಮಿತಿಗಳ ನೋಡಲ್ ಅಧಿಕಾರಿಗಳು ಸಮರ್ಪಕವಾಗಿ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು. ಸುಗಮ ಮತ್ತು ಶಾಂತಿಯುತ ಚುನಾವಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಎಸ್‍ಪಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿಗಳಾದ ಸತ್ಯನಾರಾಯಣ, ಯತೀಶ್, ಸಹಾಯಕ ಚುನಾವಣಾಧಿಕಾರಿಗಳು, ಚುನಾವಣಾ ನಿಯೋಜಿತ ಅಧಿಕಾರಿಗಳು ಹಾಜರಿದ್ದರು.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...